Sunday, January 19, 2025

ರಾಜ್ಯಾದ್ಯಂತ 4 ದಿನ ಗುಡುಗು ಸಹಿತ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಅಸಾನಿ ಚಂಡಮಾರುತದ ಅಬ್ಬರ ಕ್ಷೀಣಿಸಿದ್ದು,ಕರ್ನಾಟಕದಲ್ಲಿ ಇನ್ನೂ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ.

ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮಂಗಳವಾರದವರೆಗೆ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ 2 ದಿನಗಳಿಂದ ಚಳಿಯ ವಾತಾವರಣ ಹೆಚ್ಚಾಗಿದೆ. ಇಂದು ಕೂಡ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಇನ್ನು ಅಸಾನಿ ಚಂಡಮಾರುತ ದುರ್ಬಲಗೊಂಡಿದೆ. ಆದರೆ, ಅದೇ ಜಾಗದಲ್ಲಿ ಮೇಲ್ಮೈ ಸುಳಿಗಾಳಿಯೊಂದು ರೂಪುಗೊಂಡಿದೆ. ಇದರ ಪ್ರಭಾವ ರಾಜ್ಯದ ಮೇಲೆ ಇದ್ದು ಇನ್ನೂ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ , ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಕೋಲಾರ & ಚಿಕ್ಕಬಳ್ಳಾಪುರದಲ್ಲಿ ಇನ್ನೂ 4 ದಿನ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಹಳದಿ ಅಲರ್ಟ್​ ಘೋಷಣೆ ಮಾಡಬೇಕೆಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

RELATED ARTICLES

Related Articles

TRENDING ARTICLES