ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ ಹಾಗೂ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಇಂದು ಅಭ್ಯರ್ಥಿಗಳ ಆಯ್ಕೆ ಮಾಡಲು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ.
ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಚರ್ಚಿಸಿ ಪಟ್ಟಿ ಸಿದ್ದಪಡಿಸುವ ಸಾಧ್ಯತೆಯಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಿಎಂ ಬಸವರಾಜ ಬೊಮ್ಮಾಾಯಿ, ಪಕ್ಷದ ರಾಜ್ಯಾಾಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರು ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇದರ ಜೊತೆಗೆ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಬಿಬಿಎಂಪಿ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವ ಕುರಿತಂತೆಯೂ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಇರುವುದರಿಂದ ವಿಧಾನಪರಿಷತ್ ಹಾಗೂ ರಾಜ್ಯಸಭೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿಯೂ ಸಾಕಷ್ಟು ಲೆಕ್ಕಾಾಚಾರ ನಡೆಸಲಾಗಿದೆ.
ರಾಜ್ಯಸಭೆಗೆ ಈಗಾಗಲೇ ಹಾಲಿ ಸದಸ್ಯರಾಗಿರುವ ನಿರ್ಮಲಾ ಸೀತಾರಾಮನ್ ಹಾಗೂ ಕೆ.ಸಿ. ರಾಮಮೂರ್ತಿ ಅವರನ್ನೇ ಅಯ್ಕೆ ಮಾಡ್ತಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್ ತೆರೆ ಮರೆಯಲ್ಲಿ ಪಕ್ಷಕ್ಕಾಾಗಿ ದುಡಿದ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಬೇಕು ಎಂಬ ನಿಟ್ಟಿಲನಲ್ಲಿ ಆಲೋಚನೆ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾರಾದರೂ ಅಚ್ಚರಿಯ ವ್ಯಕ್ತಿಗಳನ್ನೂ ರಾಜ್ಯಸಭೆಗೆ ಪರಿಗಣಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇನ್ನು ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಖಾಲಿಯಾಗುವ ಏಳು ಸ್ಥಾಾನಗಳಲ್ಲಿ ಬಿಜೆಪಿ ಶಾಸಕರ ಸಂಖ್ಯಾ ಬಲದ ಆಧಾರದಲ್ಲಿ ನಾಲ್ಕು ಸ್ಥಾಾನಗಳು ಬಿಜೆಪಿಗೆ ಸಿಗುವ ಸಾಧ್ಯತೆ. ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಲಕ್ಷ್ಮಣ ಸವದಿ ಹಾಗೂ ಲೆಹರ್ ಸಿಂಗ್ ಅವರಿಗೆ ಪುನರಾಯ್ಕೆ ಮಾಡಬೇಕೊ ಅಥವಾ ಬೇರೆಯವರಿಗೆ ನೀಡಬೇಕೊ ಎನ್ನುವ ಕುರಿತಂತೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದೆ.
ಬಿಜೆಪಿ ಉನ್ನತ ಮೂಲಗಳ ಪ್ರಕಾರ ನಾಲ್ಕು ಸ್ಥಾನದಲ್ಲಿ ಒಬ್ಬರು ಮಹಿಳೆ, ಒಬ್ಬರು ಎಸ್ಸಿ ಒಬ್ಬರು ಒಬಿಸಿ ಮತ್ತೊಂದು ಸಾಮಾನ್ಯ ವರ್ಗದವರಿಗೆ ನೀಡಬೇಕು ಎನ್ನುವ ಲೆಕ್ಕಾಾಚಾರವಿದೆ. ಸಂಭಾವ್ಯ ಆಕಾಂಕ್ಷಿಗಳ ಪಟ್ಟಿಯಲ್ಲಿ ಮಹಿಳೆಯರ ಕೋಟಾದಲ್ಲಿ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಎಸ್ಸಿ ಕೋಟಾದಡಿ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಾಮಿ, ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಸದಸ್ಯ ಜಗದೀಶ ಹಿರೇಮನಿ, ಹುಬ್ಬಳ್ಳಿ ಮೂಲದ ಚಂದ್ರಶೇಖರ ಎನ್ನುವವರ ಹೆಸರುಗಳು ಮುಂಚೂಣಿಯಲ್ಲಿದೆ.
ಒಂದು ವೇಳೆ ಲೆಹರ್ ಸಿಂಗ್ ಸಿರೋಯಾ ಅವರಿಗೆ ನೀಡದಿದ್ದರೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾಣ ಅವರಿಗೆ ನೀಡುವ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ವಿಚಾರದಲ್ಲಿಯೂ ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದೆ. ಅವರು ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಒಲವು ತೋರಿಸಿದರೆ, ಒಂದು ವರ್ಷದ ಅವಧಿಗೆ ಅವರಿಗೆ ಟಿಕೆಟ್ ನೀಡಬೇಕಾ ಅಥವಾ ಮತ್ತೊಬ್ಬರಿಗೆ ಅವಕಾಶ ನೀಡಬೇಕಾ ಎನ್ನುವ ಕುರಿತಂತೆ ಸಭೆಯಲ್ಲಿ ಚರ್ಚೆ.
ಇವರಲ್ಲದೇ ಹುಡಾ ಮಾಜಿ ಅಧ್ಯಕ್ಷ ಲಿಂಗರಾಜ ಪಾಟೀಲ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಟೆಂಗಿನಕಾಯಿ, ಸಿದ್ದರಾಜು, ಶಿಕ್ಷಕರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮೋಹನ್ ಲಿಂಬಿಕಾಯಿ ಅವರ ಹೆಸರುಗಳೂ ಕೇಳಿ ಬರುತ್ತಿವೆ.