Wednesday, January 22, 2025

ಗೃಹ ಸಚಿವರ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

ಕಲಬುರಗಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಸ್ವಾಭಿಮಾನ ಇದ್ರೆ ರಾಜೀನಾಮೆ ಕೊಟ್ಟು ಕುರ್ಚಿ ಬಿಟ್ಟು ಹೋಗಬೇಕಿತ್ತು ಎಂದು ಶಾಸಕ ಪ್ರಿಯಾಂಕ್ ಖರ್ಗೆ  ಹೇಳಿದ್ದಾರೆ.

ನಗರದಲ್ಲಿಂದುಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಗೃಹ ಸಚಿವರು ನನಗೆ ಡಿಕೆ ಶಿವಕುಮಾರ, ಸಿದ್ದರಾಮಯ್ಯ ಅವರು ಸರ್ಟಿಫಿಕೇಟ್​ ಬೇಡ ಅಂದಿದ್ರು. ಆದ್ರೆ ಈಗ ಅವರ ಪಕ್ಷದ ಶಾಸಕ ಯತ್ನಾಳ ಅವರೇ ಸರ್ಟಿಫಿಕೆಟ್ ಕೊಟ್ಟಿದ್ದಾರೆ. PSI ನೇಮಕಾತಿ ಪರೀಕ್ಷೆ ಬರೆದ 57 ಸಾವಿರ ಅಭ್ಯರ್ಥಿಗಳು ಸರ್ಟಿಫಿಕೇಟ್​ ಕೊಟ್ಟಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಸ್ವಾಭಿಮಾನ ಇದ್ರೆ ರಾಜೀನಾಮೆ ಕೊಟ್ಟು ಕುರ್ಚಿ ಬಿಟ್ಟು ಹೋಗಬೇಕಿತ್ತು. ಗೃಹ ಸಚಿವರು ಯಾರನ್ನೋ ರಕ್ಷಿಸಲು ಯತ್ನಿಸುತ್ತಿದ್ದಾರೆ ಎಂದರು.

ಅದುವಲ್ಲದೇ, ಅಧಿಕಾರದ ಮೋಹದಿಂದನೋ, ಯಾರನ್ನೋ ರಕ್ಷಿಸಲೋ ಆರಗ ಜ್ಞಾನೇಂದ್ರ ಹೀಗೆ ಮಾಡುತ್ತಿದ್ದಾರೆ. ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಬಗೆದಷ್ಟು ಬಯಲಾಗ್ತಿದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES