Sunday, January 19, 2025

ಕಾರು ಅಪಘಾತದಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆ್ಯಂಡ್ರ್ಯೂ ಸೈಮಂಡ್ಸ್ ನಿಧನ

ಆಸ್ಟ್ರೇಲಿಯಾದ ಖ್ಯಾತ ಆಟಗಾರ ಆ್ಯಂಡ್ರ್ಯೂ ಸೈಮಂಡ್ಸ್ ಶನಿವಾರ ರಾತ್ರಿ ನಡೆದ ಕಾರು ಅಪಘಾತದಲ್ಲಿ ಮೃತರಾಗಿದ್ದಾರೆ.

ಟೌನ್ಸ್​ ವಿಲ್ಲೆಯಿಂದ 50 ಕಿ.ಮೀ ದೂರದಲ್ಲಿ ಹಾರ್ವೇ ರೇಂಜ್​ ಎಂಬಲ್ಲಿ ಈ ಘಟನೆ ನಡೆದಿದ್ದು, ಅಲೈಸ್​ ರಿವರ್​ ಬ್ರಿಡ್ಜ್​ ಸಮೀಪ ನಿಯಂತ್ರಣ ತಪ್ಪಿದ ಕಾರು ರಸ್ತೆಯಿಂದ ಹೊರಗೆ ಸಂಚರಿಸಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ, ದುರಂತದ ವೇಳೆ ಸೈಮಂಡ್ಸ್ ಕಾರಿನಲ್ಲಿ ಒಬ್ಬರೇ ಇದ್ದರು. ಆದರೆ ದುರ್ಘಟನೆ ನಡೆದ ತಕ್ಷಣ ತುರ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರೂ ಅವರು ಗಂಭೀರವಾಗಿ ಗಾಯಗೊಂಡ ಪರಿಣಾಮವಾಗಿ ಕೊನೆಯುಸಿರೆಳೆದರು. ಆ್ಯಂಡ್ರ್ಯೂ ಸೈಮಂಡ್ಸ್ ನಿಧನಕ್ಕೆ ಭಾರತೀಯರು ಸೇರಿದಂತೆ ವಿಶ್ವದ ಅನೇಕ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.

RELATED ARTICLES

Related Articles

TRENDING ARTICLES