Friday, September 20, 2024

SSLC ಫೇಲ್‌ ಪ್ರಮಾಣ ಕಡಿಮೆ ಮಾಡಲು 10% ಕೃಪಾಂಕ

ಬೆಂಗಳೂರು : ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ಕಾಯುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ ಸಿಕ್ಕಿದೆ . ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟು ಅಂಕಗಳ ಕೊರತೆ ಹೊಂದಿರುವವರಿಗೆ ಈ ಬಾರಿಯೂ ಗರಿಷ್ಠ ಮೂರು ವಿಷಯದಲ್ಲಿ ಶೇ.10ರಷ್ಟು ಗ್ರೇಸ್‌ ಅಂಕ ನೀಡಿ ಪಾಸ್‌ ಮಾಡಲು ಸರ್ಕಾರ ತೀರ್ಮಾನಿಸಿದೆ.ಈ ಕುರಿತ ರಿಪೋರ್ಟ್ ಇಲ್ಲಿದೆ .

ಹೌದು SSLC ವಿದ್ಯಾರ್ಥಿ ಜೀವನದ ಪ್ರಮುಖ ಕಾಲಘಟ್ಟ ಹೀಗಾಗಿ ಅನುತ್ತೀರ್ಣವಾಗಿರುವ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿನ ಶೇ.10 ಕೃಪಾಂಕಗಳನ್ನು ಅಗತ್ಯವಾರು ಹಂಚಿಕೆ ಮಾಡಲಾಗುತ್ತಿದೆ .ಈ ರೀತಿಯ ಹಂಚಿಕೆ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಇದರ ಉಪಯೋಗ ಸಿಗಲಿದೆ.

ಉದಾಹರಣೆಗೆ- ಪರೀಕ್ಷೆ ಬರೆದಿರುವ ಆರು ವಿಷಯಗಳ ಪೈಕಿ ಮೂರು ವಿಷಯಗಳಲ್ಲಿ ಉತ್ತೀರ್ಣರಾಗಿದ್ದು, ಇನ್ನುಳಿದ ಮೂರು ವಿಷಯಗಳಲ್ಲಿ ಅನುತ್ತಿರ್ಣವಾಗಿದ್ದರೆ ಆ ಮೂರು ವಿಷಯಗಳಲ್ಲಿ ಥಿಯರಿ ಪರೀಕ್ಷೆಯ ತಲಾ 80 ಅಂಕದ ಶೇ.10ರಷ್ಟು ಅಂದರೆ ಮೂರು ವಿಷಯಗಳಿಂದ 24 ಅಂಕಗಳು ಗ್ರೇಸ್‌ ಅಂಕಗಳಾಗಿ ದೊರೆಯುತ್ತವೆ.

2021ರ ಪೂರಕ ಪರೀಕ್ಷೆಗಳಲ್ಲಿ ಗ್ರೇಸ್‌ ಅಂಕದಿಂದಾಗಿ ಶೇ.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದರು. ಸುಮಾರು 13 ವಿದ್ಯಾರ್ಥಿಗಳಿಗೆ ಗರಿಷ್ಠ 26 ಅಂಕಗಳನ್ನು ನೀಡಲಾಗಿತ್ತು. ಕಳೆದ ಬಾರಿಯಂತೆ ಈ ಬಾರಿಯೂ ಆರಂಭದಲ್ಲಿ ಸರಿಯಾಗಿ ತರಗತಿಗಳು ನಡೆದಿಲ್ಲ. ಹೀಗಾಗಿ ಮಕ್ಕಳಲ್ಲಿ ಕಲಿಕೆಯ ಕೊರತೆ ಸಹಜ ಎಂದು ಗ್ರೇಸ್‌ ಅಂಕ ನೀಡಲಾಗುತ್ತಿದೆ. ಬಹುಶಃ ಈ ಬಾರಿಯೂ ಗ್ರೇಸ್‌ ಅಂಕ ಪಡೆದು ಪಾಸಾಗುವ ಮಕ್ಕಳ ಸಂಖ್ಯೆ ಹೆಚ್ಚೇ ಇರುಬಹುದಾಗಿದೆ .

ಇನ್ನು ಅಧಿಕಾರಿಗಳು ಹೇಳುವ ಪ್ರಕಾರ ಗ್ರೇಸ್‌ ಅಂಕ ನೀಡಿಕೆ ಹೊಸದೇನಲ್ಲ, ನಿಯಮಾವಳಿಯಲ್ಲೇ ಇದಕ್ಕೆ ಮೊದಲಿಂದಲೂ ಅವಕಾಶವಿದೆ. ಫಲಿತಾಂಶ ಉತ್ತಮಗೊಳಿಸುವ ಕಾರಣದಿಂದ ಗರಿಷ್ಠ ಮೂರು ವಿಷಯಗಳಿಗೆ ಶೇ.5ರಷ್ಟು ಗ್ರೇಸ್‌ ಅಂಕ ನೀಡುವ ಮಾನದಂಡ ಅನುಸರಿಸಿಕೊಂಡು ಬರಲಾಗುತ್ತಿದೆ. ಆದರೆ, ಕೋವಿಡ್‌ನಿಂದ ಶಾಲೆಗಳು ಆರಂಭವಾಗದೆ ಮಕ್ಕಳಿಗೆ ಭೌತಿಕ ತರಗತಿಗಳು ನಡೆಯದೆ ಕಲಿಕೆಯಲ್ಲಿ ಹಿಂದುಳಿದ ಕಾರಣ 2021ರಲ್ಲಿ ಮಂಡಳಿಯು ಇದನ್ನು ಶೇ.10ಕ್ಕೆ ಹೆಚ್ಚಿಸಿದೆ.

ಒಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಉತ್ತಮಗೊಳಿಸುವ ದೃಷ್ಟಿಯಿಂದ ಗ್ರೇಸ್‌ ಅಂಕ ನೀಡುವ ವಿಚಾರ ನಿಯಮಾವಳಿಯಲ್ಲೇ ಇದೆ. ಅದು ಈ ವರ್ಷವೂ ಮುಂದುವರೆಯುತ್ತಿದೆ .

RELATED ARTICLES

Related Articles

TRENDING ARTICLES