Wednesday, January 22, 2025

ನನಗೆ ಹಿಂದೂಗಳ ವೋಟ್ ಸಾಕು ಮುಸ್ಲಿಮರ ವೋಟ್ ಬೇಡ : ಶಾಸಕ ಹರೀಶ್ ಪೂಂಜಾ

ಮಂಗಳೂರು : ನನಗೆ ಮುಸ್ಲಿಮರ ಮತಗಳು ಬೇಡ, ಹಿಂದುಗಳ ಮತಗಳಷ್ಟೇ ಸಾಕು ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಹಿಂದೂ-ಮುಸ್ಲಿಂ ವಿಚಾರ ಭಾರೀ ಸದ್ದು ಮಾಡುತ್ತಿದ್ದು, ಕೋಮು ಸಾಮರಸ್ಯವನ್ನು ಕದಡುತ್ತಿದೆ. ಹಿಜಾಬ್, ಹಲಾಲ್, ಮಸೀದಿ, ಧ್ವನಿವರ್ಧಕ ಹೀಗೆ ನಾನಾ ವಿಚಾರಗಳು ಎರಡು ಕೋಮುಗಳ ನಡುವಿನ ಜನರ ಸಂಬಂಧ ಕೆಡಿಸುತ್ತಿವೆ. ಸಾಲದೆಂಬಂತೆ ಈ ವಿಚಾರಗಳ ಬಗ್ಗೆ ರಾಜಕೀಯ ಗಣ್ಯರು ನೀಡುತ್ತಿರುವ ಹೇಳಿಕೆ ಎರಡೂ ಧರ್ಮದ ನಡುವಿನ ಜನರನ್ನು ಮತ್ತಷ್ಟು ದೂರ ಮಾಡುತ್ತಿವೆ.

ಬೆಳ್ತಂಗಡಿಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದೂ, ಮುಸ್ಲಿಂ ಜನರ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಭಾರೀ ಚರ್ಚೆಗೆ ಕಾರಣ ಹುಟ್ಟು ಹಾಕಿದೆ. ಮುಂದಿನ ಚುನಾವಣೆಗೆ ಸ್ಪರ್ಧಿಸಲು ಸಂಘದ ಹಿರಿಯರು ಸೂಚಿಸಿದರೆ ಸ್ಪರ್ಧೆ ಮಾಡುತ್ತೇನೆ ಆದರೆ ಆದರೆ ಆಗ  ನಾನು ತಾಕತ್ತಿನಿಂದ ಹೇಳುತ್ತೇನೆ, ನನಗೆ ಮುಸ್ಲಿಮರ ಮತಗಳು ಬೇಡ, ಹಿಂದೂಗಳ ಮತಗಳಷ್ಟೇ ಸಾಕು ಎಂದಿದ್ದಾರೆ.

ಇನ್ನು ನನಗೆ ಕೇವಲ ಹಿಂದೂಗಳ ಓಟ್ ಅಷ್ಟೇ ಸಾಕು. ಯಾಕೆಂದರೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಆಗಬೇಕು. ಕಾಶಿಯಲ್ಲಿ ವಿಶ್ವನಾಥ ದೇವರ ಮಂದಿರ ನಿರ್ಮಾಣ ಆಗಬೇಕು. ದತ್ತ ಪೀಠದಲ್ಲಿ ದತ್ತಾತ್ರೇಯರ ಪೀಠ ನಿರ್ಮಾಣ ಆಗಬೇಕು. ಹೀಗಾಗಿ ಬಹಳ ಧೈರ್ಯದಿಂದ ಹೇಳ್ತೇನೆ ನನಗೆ ಮುಸ್ಲಿಮರ ಮತಗಳು ಬೇಡ ಎಂದು ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಭಾಷಣ ಮಾಡಿದ್ದಾರೆ.

RELATED ARTICLES

Related Articles

TRENDING ARTICLES