Friday, November 22, 2024

ಚಿಕ್ಕಬಳ್ಳಾಪುರದಲ್ಲಿ ಭೂಮಿ ಕಂಪಿಸಿದ ಅನುಭವ : ಭಯದಲ್ಲಿ ಗ್ರಾಮಸ್ಥರು

ಚಿಕ್ಕಬಳ್ಳಾಪುರ : ಇತ್ತೀಚೆಗೆ ಆಗಾಗ ಭೂಮಿಯಿಂದ ಭಾರೀ ಶಬ್ಧ ಕೇಳುತ್ತಿರುವ ಪ್ರಕರಣಗಳು ವರದಿಯಾಗುತ್ತವೆ. ಇದೀಗ ಮತ್ತೊಮ್ಮೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭೂಮಿಯಿಂದ ಕೇಳಿಬಂದ ಭಾರೀ ಶಬ್ದಕ್ಕೆ ಜನ ಬೆದರಿ ಹೋಗಿದ್ದಾರೆ.

ರಾತ್ರಿ ಸುಮಾರು 9:30 ಹಾಗೂ 9:45 ಗಂಟೆ ಸುಮಾರಿಗೆ ಎರಡು ಬಾರಿ ಶಬ್ಧ ಕೇಳಿಬಂದಿದೆ. ಇದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟಾಗಿದ್ದು, ಆತಂಕದಿಂದಲೇ ಕಾಲ ಕಳೆದಿದ್ದಾರೆ.

ಇಲ್ಲಿನ ಹಳ್ಳಿಗಳಲ್ಲಿ ತಡರಾತ್ರಿ ನಿಗೂಢ ಶಬ್ಧ ಕೇಳಿ ಬಂದಿದ್ದು, ಈ ಭಾಗದ ಜನರು ಭಯಭೀತರಾಗಿದ್ದಾರೆ. ಬಾಗೇಪಲ್ಲಿ ತಾಲ್ಲೂಕಿನ  ಪೆದ್ದ ತುಮಕೇಪಲ್ಲಿ, ಲಘು ಮದ್ದೇಪಲ್ಲಿ, ಗರ‍್ರಾಲದಿನ್ನೆ, ಶಂಖವಾರಂಪಲ್ಲಿ, ಯಲ್ಲಂಪಲ್ಲಿ, ಮದ್ದಲಖಾನೆ, ಈರಗಂಟಪಲ್ಲಿ ಹಾಗೂ ಟೆಂಕಮಾಕಲಪಲ್ಲಿ ಸೇರಿದಂತೆ ಸುತ್ತಮುತ್ತಲ ಹಲವು ಗ್ರಾಮಗಳಲ್ಲಿ ನಿನ್ನೆ ರಾತ್ರಿ ಭೂಮಿ ಕಂಪಿಸಿದ ಅನುಭವ ಆಗಿದೆ. ಭೂಮಿಯ ಒಳಗಿಂದ ಭಾರೀ ಪ್ರಮಾಣದ ಶಬ್ದ ಕೇಳಿಸಿಕೊಂಡಿದ್ದಾಗಿ ಜನರು ಹೇಳಿದ್ದಾರೆ.

ಇನ್ನು ಕಳೆದ ನಾಲ್ಕು ವರ್ಷಗಳಿಂದ ಸದರಿ ಗ್ರಾಮಗಳಲ್ಲಿ ಜನರಿಗೆ  ಮೂರು ಬಾರಿ ಭೂಮಿ ಕಂಪಿಸಿರುವ ಅನುಭವ ಎದುರಾಗಿದೆ. ಇದರಿಂದ ಗ್ರಾಮಸ್ಥರೆಲ್ಲ ಕಂಗಾಲಾಗಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕು ಅಂತ ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES