Wednesday, January 22, 2025

ಇತಿಹಾಸ ಪ್ರಸಿದ್ಧ ಕಲ್ಲೇಶ್ವರ ಸ್ವಾಮಿ ಉತ್ಸವ : ಹರಿದು ಬಂದ ಭಕ್ತ ಸಾಗರ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಕಲ್ಲೇಶ್ವರ ಸ್ವಾಮಿಯ ಉತ್ಸವ ಕಡೂರು ತಾಲೂಕಿನ ಸಿಂಗಟಗೆರೆ ಗ್ರಾಮದಲ್ಲಿರುವ ವಿಜೃಂಭಣೆಯಿಂದ ನಡೆಯಿತು.

ಕಳೆದ ವರ್ಷ ನಡೆದ ಸ್ವಾಮಿಯ ತೆಪ್ಪೋತ್ಸವ ಕಾರ್ಯಕ್ರಮದಲ್ಲೂ ಸುಮಾರು 1 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ಇಂದಿನ ಜಾತ್ರಾ ಮಹೋತ್ಸವದಲ್ಲಿ ವಿಶೇಷ ವಿಧಿ-ವಿಧಾನಗಳೊಂದಿಗೆ ಕಲ್ಲೇಶ್ವರ ಸ್ವಾಮಿಯ ಮೂರ್ತಿಯನ್ನ ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯ್ತು.

25 ಸಾವಿರಕ್ಕೂ ಅಧಿಕ ಭಕ್ತರು ಜಯಘೋಷಗಳೊಂದಿಗೆ ಸ್ವಾಮಿಯ ರಥವನ್ನ ಭಕ್ತಿ-ಭಾವದಿಂದ ಎಳೆದು ಸಂಭ್ರಮಿಸಿದರು. ಹರಕೆ ಹೊತ್ತ ಭಕ್ತರು ಉರುಳು ಸೇವೆ ಮಾಡಿ ಹರಕೆ ತೀರಿಸಿದರು. ಜಾತ್ರೆಯಲ್ಲಿ ಭಕ್ತರಿಗೆ ಅನ್ನಸಂತರ್ಪಣೆಯನ್ನೂ ಕೂಡ ಏರ್ಪಡಿಸಲಾಗಿತ್ತು.

RELATED ARTICLES

Related Articles

TRENDING ARTICLES