ಬೆಂಗಳೂರು : ಕಲಬುರಗಿಯಿಂದ ಹುಟ್ಟಿಕೊಂಡ ಈ ಪ್ರಕರಣದ ನಂಟು ಇದೀಗ ಬೆಂಗಳೂರು, ಹಾಸನ, ಕೋಲಾರ ಸೇರಿ ರಾಜ್ಯಾದ್ಯಂತ ಹಬ್ಬುತ್ತಿದೆ. ಈ ಹೊತ್ತಿನಲ್ಲೇ, ನೊಂದ ಪಿಎಸ್ಐ ಅಭ್ಯರ್ಥಿಗಳು ರಕ್ತದಲ್ಲಿ ಬರೆದಿರುವ ಪತ್ರವೊಂದು ರಾಜ್ಯದ ಜನರ ಮನಕಲುಕುವಂತೆ ಮಾಡಿದೆ.
PSI ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಬಯಲಾಗುತ್ತಿದ್ದಂತೆ ಕರ್ನಾಟಕ ಸರ್ಕಾರ ಮರುಪರೀಕ್ಷೆ ನಡೆಸುವುದಾಗಿ ಮಹತ್ವದ ತೀರ್ಮಾನ ತೆಗದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು. ಜೊತೆಗೆ ದೇಶದ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.
ನೊಂದ ಪಿಎಸ್ಐ ಅಭ್ಯರ್ಥಿಗಳು ರಕ್ತದಲ್ಲಿ ಬರೆದಿದ್ದಾರೆ ಎನ್ನಲಾದ ಪತ್ರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಎರಡು ಪುಟಗಳ ಪತ್ರ ಬರೆದು ನ್ಯಾ ಯ ಓದಗಿಸುವಂತೆ ಮನವಿ ಮಾಡಿದ್ದಾರೆ. ಆದರೆ ಈ ಪತ್ರ ಬರೆದವರು ಯಾರು ಎಂಬುದು ತಿಳಿದುಬಂದಿಲ್ಲ . 2021ರಲ್ಲಿ ನಡೆದ FDA ಪರೀಕ್ಷೆಯಲ್ಲಿ ಅಕ್ರಮವಾಗಿದೆ ಅದನ್ನು ಕೂಡ ತನಿಖೆ ಮಾಡಿ ನ್ಯಾಯ ಕೊಡಿಸಬೇಕು ಎಂದು ಬರೆದಿದ್ದಾರೆ.