Monday, December 23, 2024

ಪರೀಕ್ಷಾ ಅಕ್ರಮಗಳಿಂದ ಎಚ್ಚೆತ್ತ ಶಿಕ್ಷಣ ಇಲಾಖೆ

ಬೆಂಗಳೂರು: ಇದೇ ತಿಂಗಳು ಮೇ 21 ಹಾಗೂ 22 ರಂದು 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ನಡೆಯಲಿದೆ. ಪಿಎಸ್ ಐ ನೇಮಕಾತಿ ಅಕ್ರಮ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಲ್ಲಿ ನಡೆದ ಗೋಲ್ ಮಾಲ್​​ನಿಂದ ಶಿಕ್ಷಣ ಇಲಾಖೆಗೂ ಆತಂಕ ಕಾಡ್ತಿದೆ. ಸ್ಪರ್ಧಾತ್ಮಕ ಪರೀಕ್ಷೆ ಯಶಸ್ವಿ ಮಾಡೋಕೆ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಇದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿಯನ್ನೂ ಹೊರಡಿಸಿದೆ.

ಇನ್ನು, ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ದುರ್ಬಳಕೆ ಆತಂಕ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ವಾಚ್ ಕೂಡ ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದ 500 ಮೀಟರ್ ಸುತ್ತ 144 ಸೆಕ್ಷನ್ ಜಾರಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದ ಹೊರಗೆ ಹಾಗೂ ಕೊಠಡಿ ಬಳಿ ಎರಡೆರಡು ಬಾರಿ ತಪಾಸಣೆ ಮಾಡಲಾಗುತ್ತೆ. ಅಲ್ಲದೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮೊದಲೇ ಹಾಜರ್ ಇರಬೇಕು. ಸ್ವಲ್ಪ ತಡವಾದ್ರೂ ಅಭ್ಯರ್ಥಿಗಳಿಗೆ ಗೇಟ್ ಪಾಸ್ ಸಿಗುತ್ತೆ. ಇದಕ್ಕೆ ಜಿಲ್ಲಾ ಶಿಕ್ಷಣಾಧಿಕಾರಿಗಳು ಹಾಗೂ ಸ್ಥಳೀಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟೆಚ್ಚರ ವಹಿಸಲಿದ್ದಾರೆ ಅಂತಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವ್ರು ಪವರ್ ಟಿವಿಗೆ ಹೇಳಿದ್ರು

ಅದುವಲ್ಲದೇ, ರಾಜ್ಯಾಧ್ಯಂತ ಒಂದು ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸಹಾಯಕ ಪ್ರಾಧ್ಯಾಪಕ ಹುದ್ದೆಯಲ್ಲಿ ನಡೆದಂತೆ ಇಲ್ಲೂ ಗೋಲ್‌ಮಾಲ್ ನಡೆಯೋ ಸಾಧ್ಯತೆ ಇರೋದ್ರಿಂದ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿವೆ.

ಒಟ್ಟಿನಲ್ಲಿ ಪಿಎಸ್ ಐ ಅಕ್ರಮ ನೇಮಕಾತಿ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಲ್ಲಿ ನಡೆದ ಗೋಲ್ ಮಾಲ್‌ಗಳಿಂದ ಆಯಾ ಇಲಾಖೆಗಳಿಗೂ ಮಸಿ ಅಂಟಿಕೊಂಡಿದೆ. ಶಿಕ್ಷಣ ಇಲಾಖೆಯಲ್ಲೂ ಅಂತಹ ಯಾವುದೇ ಅಕ್ರಮ ನಡೆಯಬಾರದು ಅಂತಾ ಅಧಿಕಾರಿಗಳಿಗೆ ಸಚಿವ ಬಿ.ಸಿ ನಾಗೇಶ್ ಕಟ್ಟುನಿಟ್ಟಿನ ಆದೇಶ ಹೊರಸಿದ್ದಾರೆ.

RELATED ARTICLES

Related Articles

TRENDING ARTICLES