Monday, December 23, 2024

‘777 ಚಾರ್ಲಿ’ ಟ್ರೇಲರ್​ಗೆ ಫ್ಯಾನ್ಸ್​ ಫಿದಾ

ನಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯಿಸಿರುವ ‘777 ಚಾರ್ಲಿ’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ದಿನೇ ದಿನೇ ಟ್ರೇಲರ್ ವೀಕ್ಷಣಾ ಸಂಖ್ಯೆಯೂ ಹೆಚ್ಚುತ್ತಿದೆ.

ಅಭಿಮಾನಿಗಳು ಸೋಷಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿ ವಾವ್​ ಎಂದಿದ್ದಾರೆ. ಪರಭಾಷೆಯ ಹಲವು ಸ್ಟಾರ್ ನಟ-ನಟಿಯರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ‘777 ಚಾರ್ಲಿ’ ಸಿನಿಮಾದ ಟ್ರೇಲರ್ ಶೇರ್ ಮಾಡಿಕೊಳ್ಳುವ ಮೂಲಕ ರಕ್ಷಿತ್ ಶೆಟ್ಟಿ ಮತ್ತು ಅವರ ತಂಡಕ್ಕೆ ಬೆಂಬಲ ನೀಡಿದ್ದಾರೆ.

ಈ ಚಿತ್ರಕ್ಕೆ ಕಿರಣ್ ರಾಜ್ ನಿರ್ದೇಶನ ಮಾಡಿದ್ದು, ಟ್ರೇಲರ್ ಗಮನ ಸೆಳೆಯುತ್ತಿದೆ. ಶ್ವಾನ ಮತ್ತು ಮನುಷ್ಯನ ನಡುವಿನ ಬಾಂಧವ್ಯದ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಈ ಕಥೆ ಸಖತ್ ಎಮೋಷನಲ್ ಆಗಿರಲಿದೆ ಎಂಬುದಕ್ಕೆ ಟ್ರೇಲರ್​​ನಲ್ಲಿ ಸುಳಿವು ಸಿಕ್ಕಿದೆ. ರಕ್ಷಿತ್ ಶೆಟ್ಟಿ ಜೊತೆ ಸಂಗೀತಾ ಶೃಂಗೇರಿ, ರಾಜ್ ಬಿ. ಶೆಟ್ಟಿ , ದಾನಿಶ್ ಸೇಠ್ ಮುಂತಾದವರು ‘777 ಚಾರ್ಲಿ’ ಚಿತ್ರ ದಲ್ಲಿ ನಟಿಸಿದ್ದು, ಜೂನ್ 10ಕ್ಕೆ ಈ ಸಿನಿಮಾ ರಿಲೀಸ್ ಆಗಲಿದೆ.

RELATED ARTICLES

Related Articles

TRENDING ARTICLES