Monday, December 23, 2024

ಕಾಂಗ್ರೆಸ್‌ ನಾಯಕ ಪಿ.ಚಿದಂಬರಂಗೆ CBI ಶಾಕ್‌..!

ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ವಿರುದ್ಧ ದಾಖಲಾಗಿರುವ ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಮಂಗಳವಾರ ಬೆಳಿಗ್ಗೆ ಆಘಾತ ನೀಡಿದೆ. ಅವರಿಗೆ ಸಂಬಂಧಿಸಿದ ಸೇರಿದ ಸ್ಥಳಗಳಲ್ಲಿ ಸಿಬಿಐ ಮುಂಜಾನೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ.

ದಿಲ್ಲಿ ಮತ್ತು ತಮಿಳುನಾಡು ರಾಜಧಾನಿ ಚೆನ್ನೈ ಹಾಗೂ ಶಿವಗಂಗೈನಲ್ಲಿ ಇರುವ ಚಿದಂಬರಂ ಅವರ ಅನೇಕ ಆಸ್ತಿಪಾಸ್ತಿಗಳ ಮೇಲೆ ಸಿಬಿಐ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಕಾರ್ತಿ ಚಿದಂಬರಂ ಅವರ ಮನೆ ಸೇರಿದಂತೆ ಅನೇಕ ಕಡೆ ಪರಿಶೀಲನೆ ನಡೆಸಲಾಗುತ್ತಿದೆ. ಒಟ್ಟು 7 ಕಡೆಗಳಲ್ಲಿ ಏಕಕಾಲದಲ್ಲಿ CBI ದಾಳಿ ಮಾಡಿದೆ.

ಚಿದಂಬರಂ ಅವರ ಮಗ ಹಾಗೂ ಸಂಸದ ಕಾರ್ತಿ ಚಿದಂಬರಂ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರಿಗೆ ಸೇರಿದ ಈ ಚಿದಂಬರಂ ನಿವಾಸ, ಕಚೇರಿ, ಚೆನ್ನೈ, ಮುಂಬೈ, ದೆಹಲಿಯಲ್ಲಿ ನಗರಗಳು ಸೇರಿದಂತೆ ಸುಮಾರು ಏಳು ಸ್ಥಳಗಳಲ್ಲಿ ಸಿಬಿಐ ಪರಿಶೀಲನೆ ನಡೆಸುತ್ತಿದೆ. ಮೂಲಗಳ ಪ್ರಕಾರ, 2010- 14ರ ಅವಧಿಯಲ್ಲಿ ವಿದೇಶಿ ಹಣ ರವಾನೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಯು ಕಾರ್ತಿ ಚಿದಂಬರಂ ವಿರುದ್ಧ ಹೊಸದಾಗಿ ಪ್ರಕರಣ ದಾಖಲು ಮಾಡಿದೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES