Monday, December 23, 2024

ಕಾಸ್ಮೆಟಿಕ್ ಸರ್ಜರಿ ಎಫೆಕ್ಟ್​​ : ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ನಿಧನ

ಬೆಂಗಳೂರು : ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ಕಾಸ್ಮೆಟಿಕ್ ಸರ್ಜರಿಗೆ ಒಳಗಾಗಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.  ಇವರು ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ನಟಿ ಕುಟುಂಬ ವಾಸವಿದ್ದರು.

ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ. ಈ ಘಟನೆಯು ನಗರದ ಸುಬ್ರಹ್ಮಣ್ಯ ನಗರ ವ್ಯಾಪ್ತಿಯಲ್ಲಿ ನಡೆದಿದೆ.

ಫ್ಯಾಟ್ ಚಿಕಿತ್ಸೆಗೆಂದು ನಿನ್ನೆ ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ಆಡ್ಮಿಟ್ ಆಗಿದ್ದರು. ಸಂಜೆ ನಾಲ್ಕು ಗಂಟೆ ಹೊತ್ತಿಗೆ ಸಿರಿಯಸ್‌ ಆಗಿ ಶಂಕರಮಠದ ಕಾಡೇ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.ಫ್ಯಾಟ್ ರಿಡಕ್ಷನ್ ಸರ್ಜರಿ ಎಂದು ಕರೆಯಲಾಗುವ ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆಗೆ ಆಕೆ ಒಳಗಾಗಿದ್ದರು.

ಪೋಷಕರಿಗೆ ಮಾಹಿತಿ ನೀಡದೇ ಚೇತನಾ ರಾಜ್ ಫ್ಯಾಟ್‌ ಸರ್ಜರಿ ಮಾಡಿಸಿಕೊಂಡಿದ್ದರು. ಸೋಮವಾರ ಬೆಳಗ್ಗೆ 9:30 ಕ್ಕೆ ಆಸ್ಪತ್ರೆಗೆ ದಾಖಲಾಗಿ ಸರ್ಜರಿ ಮಾಡಿಸಿಕೊಂಡಿದ್ದಾರೆ. ನಂತರ ವಿಚಾರ ಗೊತ್ತಾಗಿ ಪೋಷಕರು ಆಸ್ಪತ್ರೆಗೆ ಹೋಗಿದ್ದರು. ಸರ್ಜರಿ ನಂತರ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು ನಟಿ ಪರಿಸ್ಥಿತಿ ಗಂಭೀರವಾಗಿದೆ. ನಾಲ್ಕು ಗಂಟೆಗೆ ಹೆಚ್ಚಿನ ಚಿಕಿತ್ಸೆಗೆ ಮತ್ತೊಂದು ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಅಷ್ಟರಲ್ಲಾಗಲೇ ನಟಿ ಮೃತಪಟ್ಟಿದ್ದಾರೆ.

ಕಿರುತೆರೆಯ ಗೀತಾ, ದೊರೆಸಾನಿ ಸೇರಿದಂತೆ ಹಲವು ಧಾರವಾಹಿ ಹಾಗೂ ಸಿನಿಮಾಗಳಲ್ಲಿಯೂ ಚೇತನಾ ರಾಜ್‌ ನಟಿಸಿದ್ದರು. ಇನ್ನಷ್ಟೇ ತೆರೆ ಕಾಣಬೇಕಾಗಿದ್ದ ಹವಾಯಾಮಿ ಸಿನಿಮಾದಲ್ಲಿಯೂ ಚೇತನಾ ನಟಿಸಿದ್ದರು.

RELATED ARTICLES

Related Articles

TRENDING ARTICLES