Friday, April 25, 2025

ಕರ್ನಾಟಕ ಕಟುಕರ ಕೈಯಲ್ಲಿದೆ : ಮಾಜಿ ಸಿಎಂ ಹೆಚ್ಡಿಕೆ

ಬೆಂಗಳೂರು : ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ ಎಂದು ಮಾಜಿ ಸಿ ಎಂ ಹೆಚ್​​ ಡಿ ಕುಮಾರಸ್ವಾಮಿ ಆಡಳಿತ ಪಕ್ಷದ ವಿರುದ್ಧ ಟ್ವಿಟ್​​ ಮಾಡುವ ಮೂಲಕ ಕಿಡಿಕಾರಿದ್ದಾರೆ.

ಆರ್​ಎಸ್​​ಎಸ್​ ಸಂಸ್ಥಾಪಕ ​ ಡಾ.ಕೇಶವ ಬಲಿರಾಂ ಹೆಡಗೇವಾರ್‌ ಕುರಿತ ಮಾಹಿತಿಯನ್ನು ಪಠ್ಯಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಅಧಿಕೃತ ಟ್ವಿಟರ್​​​​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಬಿಜೆಪಿಯ ನೈಜ ಬಣ್ಣದ ವಿಸ್ತೃತರೂಪವೇ ಆಯ್ದ ಪಠ್ಯಗಳನ್ನು ಟಾರ್ಗೆಟ್‌ ಮಾಡಿ ಡಿಲೀಟ್‌ ಮಾಡುವುದು. ಪಕ್ಷದ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ. ನನ್ನ ಜತೆ ಮೈತ್ರಿ ಸರಕಾರ ಮಾಡಿದಾಗ ಅವರ ಬೇಳೆ ಬೇಯಲಿಲ್ಲ. ʼಆಪರೇಷನ್‌ ಕಮಲʼದ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ʼಸ್ವಘೋಷಿತ ಡೋಂಗಿ ರಾಷ್ಟ್ರಭಕ್ತರುʼ ಇನ್ನೇನು ಮಾಡಲು ಸಾಧ್ಯ? ಎಂದು ಬಿಜೆಪಿ ಪಕ್ಷವನ್ನು ಪ್ರಶ್ನಿಸಿದ್ದಾರೆ.

ಇನ್ನು ಭಗತ್‌ ಸಿಂಗ್‌ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಗಲ್ಲಿಗೇರಿದರು. ಸಂಘ ಪರಿವಾರಿಗಳು ಅದೇ ಬ್ರಿಟೀಷರಿಗೆ ಪರಿಚಾರಿಕೆ ಮಾಡಿಕೊಂಡು ಸ್ವಾತಂತ್ರ್ಯಕ್ಕಿಂತ ಗುಲಾಮಗಿರಿಯೇ ಲೇಸೆಂದುಕೊಂಡಿದ್ದರು. ಇಂಥವರು, ಭಗತ್‌ ಸಿಂಗ್‌ʼರಂಥ ರಾಷ್ಟ್ರಪ್ರೇಮಿಗಳನ್ನು ಸಹಿಸಿಕೊಳ್ಳುತ್ತಾರೆಯೇ? ಎಂದು ವಾಗ್ದಾಳಿ ನಡೆಸಿದ್ದಾರೆ.

ಅಷ್ಟೇ ಅಲ್ಲದೇ ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ, ಚಾರಿತ್ರ್ಯಹೀನತೆಯೇ ಮೈವೇತ್ತ ಬಿಜೆಪಿಗೆ ರಾಜ್ಯದ ಬೆಳವಣಿಗೆಯಲ್ಲಿ ನಂಬಿಕೆ ಇಲ್ಲ. ಹಿಜಾಬ್‌, ಆಹಾರ, ವ್ಯಾಪಾರ, ಹಲಾಲ್‌ ಎಲ್ಲಾ ಆಯಿತು. ಈಗ ಪಠ್ಯಕ್ಕೆ ನೇತಾಡುತ್ತಿದೆ. ಅಭಿವೃದ್ಧಿ ಎಂದರೆ ಆ ಪಕ್ಷಕ್ಕೆ ಅಪಥ್ಯ ಎಂದರು.

ಅಲ್ಲದೇ ಪಠ್ಯವನ್ನು ವಿಕೃತಿಗೊಳಿಸುತ್ತಿರುವುದು ಎಂದರೆ, ಕನ್ನಡ ಆಸ್ಮಿತೆಯನ್ನು ಹತ್ತಿಕ್ಕುವ ಪಾತಕ ಯತ್ನ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು, ಪ್ರಶ್ನಿಸಬೇಕು. ಹೋರಾಟಕ್ಕೂ ಇಳಿಯಬೇಕು. ಹಾಗೂ “ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!!” ಎಂದು ಸರಣಿ ಟ್ವಿಟ್​ ಮಾಡುವ​ ಮೂಲಕ ಗುಡುಗಿದ್ದಾರೆ.

RELATED ARTICLES

Related Articles

TRENDING ARTICLES