Wednesday, January 22, 2025

ನಾಳೆಯಿಂದ ರಾಜ್ಯದೆಲ್ಲೆಡೆ ಮಳೆ ಆರ್ಭಟ

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18(ನಾಳೆ)ರಿಂದ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮುಂದಿನ 4 ದಿನ, ಬೀದರ್‌, ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಇಂದು ಮತ್ತು ನಾಳೆ ಗುಡುಗು-ಮಿಂಚುಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

RELATED ARTICLES

Related Articles

TRENDING ARTICLES