Monday, December 23, 2024

ಮಳೆಯಿಂದ ಹಾನಿ: ಸಿಎಂ ಬೊಮ್ಮಾಯಿ ಪರಿಹಾರ ಘೋಷಣೆ

ಬೆಂಗಳೂರು : ಸಿಲಿಕಾನ್​​ ಸಿಟಿಯಲ್ಲಿ ಮಳೆಯ ಅವಾಂತರ ಹಿನ್ನೆಲೆ ಹಾನಿಗೊಳಗಾದವರಿಗೆ ಸಿಎಂ ಬೊಮ್ಮಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಮಳೆಯಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ನಗರದಲ್ಲಿ ನಿನ್ನೆ ವರುಣನ ಆರ್ಭಟ ಜೋರಾಗಿತ್ತು. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಹಲವು ಕಡೆ ಮನೆಗಳಿಗೆ ನೀರು ನುಗ್ಗಿ ತೊಂದರೆಯಾಗಿದೆ. ಹೀಗಾಗಿ ನೀರು ನುಗ್ಗಿರುವ ಮನೆಗಳಿಗೆ 25 ಸಾವಿರ ರೂಪಾಯಿ ಪರಿಹಾರ ಮತ್ತು ಮಳೆಯಿಂದ ಮೃತಪಟ್ಟವರಿಗೆ ₹5 ಲಕ್ಷ ಪರಿಹಾರ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ನೀರು ನುಗ್ಗಿ ಸಮಸ್ಯೆಯಾದವರಿಗೆ ಊಟದ ವ್ಯವಸ್ಥೆ ಮಾಡುವುದರ ಜೊತೆಗೆ ಮನೆ ಕ್ಲೀನ್ ಮಾಡಿಸಿಕೊಡುವ ವ್ಯವಸ್ಥೆ ಮಾಡುತ್ತೇವೆ ಅಂತ ತಿಳಿಸಿದರು.

ಕಾಲುವೆ ಪಕ್ಕದಲ್ಲಿ ಮನೆ ಕಟ್ಟಿಕೊಂಡಿದರಿಂದ ಈ ಅವಾಂತರ ಸೃಷ್ಟಿಯಾಗಿದ್ದು, ಈ ಅವಾಂತರಕ್ಕೆ ಏನು ಕಾರಣ ಎಂದು ಚರ್ಚಿಸುತ್ತೇವೆ. ಎಲ್ಲ ರಾಜಕಾಲುವೆಗಳನ್ನ ಮುಕ್ತಗೊಳಿಸಿ ಕಾಮಗಾರಿಯನ್ನು 1 ವರ್ಷದಲ್ಲಿ ಎಲ್ಲವನ್ನೂ ಸರಿಪಡಿಸುವ ಕೆಲಸ ಮಾಡುತ್ತೇವೆ ಅಂತ ಸಿಎಂ ಭರವಸೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES