Friday, December 27, 2024

ಅಪ್ಪ ಅಷ್ಟೇ ಅಲ್ಲ, ನನ್ನ ಗುರು, ದೈವ : ಹೆಚ್​ಡಿಕೆ

ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ 90ನೇ ಜನ್ಮದಿನ ಇಂದು. ಈ ಸಂದರ್ಭದಲ್ಲಿ ಅವರ ಪುತ್ರ, ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಭಾವೋದ್ವೇಗದ ನುಡಿಗಳೊಂದಿಗೆ ಟ್ವೀಟ್ ಮಾಡಿದ್ದಾರೆ.

ಎಚ್ ಡಿ ದೇವೇಗೌಡರು ತಮಗೆ ತಂದೆ ಮಾತ್ರವಲ್ಲ, ಗುರು, ದೈವ, ಶಕ್ತಿಯೂ ಆಗಿದ್ದಾರೆಂದು ಎಚ್‌ಡಿಕೆ ತಮ್ಮ ಸರಣಿ ಟ್ವೀಟ್‌ಗಳಲ್ಲಿ ಬಣ್ಣಿಸಿದ್ದಾರೆ. ಅಲ್ಪಕಾಲವಷ್ಟೇ ಅಧಿಕಾರದಲ್ಲಿದ್ದರೂ ಕರ್ನಾಟಕ ಮತ್ತು ಭಾರತಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದವರು ಇವರು ಕಾಯಾ ವಾಚಾ ಮನಸಾ ಜನರ ಉದ್ಧಾರಕ್ಕಾಗಿ ಶ್ರಮಿಸಿದ ಅವರು ಭಾರತದ ರಾಜಕೀಯ ಕರ್ಮಯೋಗಿ. ತೊಂಬತ್ತರ ಹರೆಯದಲ್ಲೂ ಜನರಪರ ಹೋರಾಟ ನಡೆಸುತ್ತಿರುವ ಕರ್ಮಯೋಗಿ” ಎಂದು ಮಾಜಿ ಸಿಎಮ್ ಕುಮಾರಸ್ವಾಮಿ ತಮ್ಮ ತಂದೆಯನ್ನು ಕೊಂಡಾಡಿದ್ದಾರೆ.

ಇನ್ನು, ಸದಾ ನನ್ನ ಕೈಹಿಡಿದು ಮುನ್ನಡೆಸಿದ ಅವರು ನನ್ನ ಪಾಲಿಗೆ ತಂದೆಯಷ್ಟೇ ಅಲ್ಲ; ಗುರು, ದೈವ, ಶಕ್ತಿಯೂ ಹೌದು. ನನಗಷ್ಟೇ ಅಲ್ಲ, ಈ ನಾಡಿಗೆ, ದೇಶಕ್ಕೆ ಇನ್ನಷ್ಟು ದೀರ್ಘಕಾಲ ಅವರ ಸೇವೆ- ಮಾರ್ದರ್ಶನ ಅಗತ್ಯ ಇದೆ. ಆ ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ” ಎಂದು ಕುಮಾರಸ್ವಾಮಿ ಈ ಸಂದರ್ಭದಲ್ಲಿ ಪ್ರಾರ್ಥಿಸಿದ್ದಾರೆ.

RELATED ARTICLES

Related Articles

TRENDING ARTICLES