Thursday, January 23, 2025

ಬಲಿಷ್ಠ LSG ತಂಡಕ್ಕೆ KKR ಸವಾಲ್

IPL-2022 ಟೂರ್ನಿಯ ಲೀಗ್‌ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದಿದ್ದು,ಇಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಪ್ಲೇ-ಆಫ್‌ ರೇಸ್‌ನಲ್ಲಿರುವ ತಂಡಗಳ ನಡುವಿನ ಪೈಪೋಟಿ ಮತ್ತಷ್ಟು ಹೆಚ್ಚಾಗಿದೆ. ಬುಧವಾರ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಲಖನೌ ಸೂಪರ್‌ ಜೈಂಟ್ಸ್‌ ಹಾಗೂ ಕೋಲ್ಕತಾ ನೈಟ್‌ ರೈಡ​ರ್ಸ್‌ ತಂಡಗಳು ಮುಖಾಮುಖಿಯಾಗಲಿವೆ.

ಕೆ.ಎಲ್‌.ರಾಹುಲ್‌ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು ಆಡಿದ 13 ಪಂದ್ಯಗಳಲ್ಲಿ 8ರಲ್ಲಿ ಗೆದ್ದಿದ್ದು, 16 ಅಂಕದೊಂದಿಗೆ ಪ್ಲೇ-ಆಫ್‌ ಸ್ಥಾನ ಬಹುತೇಕ ಖಚಿತಪಡಿಸಿಕೊಂಡಿದೆ. ಆದರೆ ಸ್ಥಾನ ಅಧಿಕೃತಗೊಳಿಸುವ ಕಾತರದಲ್ಲಿರುವ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಇನ್ನು, ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆಯುವ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವನ್ನು ಆಡುವುದರಿಂದ ಲಖನೌ ತಂಡವು ಈ ಪಂದ್ಯದಲ್ಲಿ ಶತಾಯಗತಾಯ ಗೆಲುವು ಸಾಧಿಸಲು ಎದುರು ನೋಡುತ್ತಿದೆ.

RELATED ARTICLES

Related Articles

TRENDING ARTICLES