Monday, December 23, 2024

ಸಿದ್ದರಾಮಯ್ಯ ಸಿಎಂ ಆಗಲ್ಲ : ಸಚಿವ ಬಿ.ಸಿ.ಪಾಟೀಲ್

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಆದರೆ ತಾನೇ ಅವರು ಕೊಟ್ಟ ಭರವಸೆಯನ್ನು ಈಡೇರಿಸುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟರು.

ನಾನು ಸಿಎಂ ಆದರೆ ದಲಿತರ ಸಾಲ ಮನ್ನಾ ಮಾಡುತ್ತೇನೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಟ್ಟ ಅವರು, ಸಿದ್ದರಾಮಯ್ಯ ಅವರು ಸಿಎಂ ಆದರೆ ತಾನೇ, ಅವರು ಕೊಡುವ ಭರವಸೆ ಈಡೇರಿಸುವುದು. ಕಾಂಗ್ರೆಸ್‍ನಲ್ಲಿ ಕೂಸು ಹುಟ್ಟುವ ಮುಂಚೆ ಕುಲಾಯಿ ಹೊಲಿಸಲಾಗುತ್ತಿದೆ. ಬಿಜೆಪಿ ಮುಂದಿನ ಭಾರಿಯೂ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ಅಲ್ಲದೇ ಅವರಿಗೆ ಬಿಜೆಪಿ ಬಗ್ಗೆ ಹೇಳಲು ಏನೂ ಇಲ್ಲ. ನಮ್ಮ ಸರ್ಕಾರದಿಂದ ಅವರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದರೆ, ಜನರಿಗೆ ಪ್ರಯೋಜನ ಆಗುತ್ತಿದೆ ಎಂದು ವ್ಯಂಗ್ಯವಾಡಿದರು.

ಇನ್ನು ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ. ರಸಗೊಬ್ಬರವನ್ನು ಸಬ್ಸಿಡಿ ದರದಲ್ಲಿ ಮಾರುತ್ತಿದ್ದೇವೆ. ಕೃತಕ ಅಭಾವ ಸೃಷ್ಟಿಸಿದರೆ ಅಂತವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತೆ. ಕಾಳಸಂತೆಕೋರರ ಪತ್ತೆಗೆ ಸ್ಕ್ವಾಡ್ ರಚಿಸಲಾಗಿದೆ. ಮಳೆಹಾನಿ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES