Monday, December 23, 2024

‘ನನ್ನ ಮೊಮ್ಮಗಳು ಪುಣ್ಯವಂತೆ‘ – ಶಾಸಕ ಜಿ.ಟಿ ದೇವೆಗೌಡ

ಮೈಸೂರು: ‌ನನ್ನ ಮೊಮ್ಮಗಳು ಪುಣ್ಯವಂತೆ ಎಂದು ಮೈಸೂರಿನಲ್ಲಿ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ಮೊಮ್ಮಗಳ ಸಾವಿನ ಬಗ್ಗೆ ಮಾತನಾಡಿದ ಅವರು, ನನ್ನ ಮೊಮ್ಮಗಳು ಪುಣ್ಯವಂತೆ. ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಬಂದ ರೀತಿಯಲ್ಲಿ ಗಣ್ಯರು, ಜನರು ಅವಳ ಸಾವಿನ ದಿನ ಬಂದಿದ್ದರು. ನನ್ನ ಮೊಮ್ಮಗಳು ಬಹಳ ಚೂಟಿಯಾಗಿದ್ದಳು. ಅವಳಿಗೆ ಕ್ಯಾನ್ಸರ್ ಬಂದಿತ್ತು. ಆದರೆ ಏಳು ತಿಂಗಳಲ್ಲಿ ಅವಳು ಕ್ಯಾನ್ಸರ್ ಗೆದಿದ್ದಳು. ವೈದ್ಯರ ಕೂಡ ಕ್ಯಾನ್ಸರ್ ಮುಕ್ತ ಎಂದು ಹೇಳಿ ಸಂತೋಷ ಪಟಿದ್ದರು. ಆದರೆ, ಅವಳಿಗೆ ದಿಢೀರನೆ ಆ ಲಕ್ಷಣಗಳು ಕಾಣಿಸಿಕೊಂಡು ಸಾವು ಬಂತು. ಗೌರಿ ಸಾವಿನ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಮುಖಂಡರು ಸಾಂತ್ವನ ಹೇಳಿದ್ದಾರೆ ಎಂದರು.

ಇನ್ನು ನಾನು ಯಾವ ಪಕ್ಷದವರ ಜೊತೆಗೂ ರಾಜಕಾರಣ ಮಾತನಾಡಿಲ್ಲಾ. ಕುಮಾರಸ್ವಾಮಿ‌ ಅವರ ಜೊತೆ ಮಾತು ಬಿಟ್ಟು ಎರೆಡುವರೆ ವರ್ಷವಾಗಿತ್ತು. ಅವರು ಕೂಡ ಬಂದು ಸಾಂತ್ವಾನ ಹೇಳಿದ್ದಾರೆ.ನಿಖಿಲ್ ಕುಮಾರಸ್ಚಾಮಿ ನಮ್ಮ ಕುಟುಂಬದ ಸದಸ್ಯ ಇದ್ದಂತೆ. ನನ್ನ ಮಗ ಮತ್ತು ನಿಖಿಲ್ ಆತ್ಮೀಯ ಸ್ನೇಹಿತರು. ಹೀಗಾಗಿ ನಮ್ಮ ನೋವಿನ ಜೊತೆಗೆ ಅವರಿದ್ದಾರೆ. ರಾಜಕಾರಣ ವಿಚಾರ ಮುಂದೆ ಮಾತನಾಡುತ್ತೇನೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES