Monday, December 23, 2024

IPL 2022 : ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ

ಐಪಿಎಲ್ 2022ರ 15ನೇ ಆವೃತ್ತಿಯ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿವೆ. ಈಗಾಗಲೇ ಪ್ಲೇಆಫ್ ಪ್ರವೇಶಿಸಿರುವ ಗುಜರಾತ್ ತಂಡಕ್ಕೆ ಇದು ಔಪಚಾರಿಕ ಪಂದ್ಯವಾಗಿದ್ದರೆ, ಆರ್‌ಸಿಬಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಅದರಲ್ಲೂ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲುವ ಮೂಲಕ ಇದೀಗ ಆರ್‌ಸಿಬಿ ಒತ್ತಡಕ್ಕೆ ಸಿಲುಕಿದೆ. ಏಕೆಂದರೆ ಪ್ಲೇಆಫ್ ಪ್ರವೇಶಿಸಲು ಗುಜರಾತ್ ಟೈಟನ್ಸ್ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ಬಳಗ ಗೆಲ್ಲಲೇಬೇಕಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ಆರ್‌ಸಿಬಿ ತಂಡವು ಬಲಿಷ್ಠ ಹನ್ನೊಂದರ ಬಳಗವನ್ನು ಕಣಕ್ಕಿಳಿಸಬೇಕಿದೆ.

ಒಂದು ವೇಳೆ ಗುಜರಾತ್ ಟೈಟನ್ಸ್ ವಿರುದ್ಧ ಆರ್‌ಸಿಬಿ ತಂಡ ಸೋತರೆ, ಮುಂಬೈ ಇಂಡಿಯನ್ಸ್ ವಿರುದ್ಧ ಗೆಲ್ಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ನೇರವಾಗಿ ಪ್ಲೇಆಫ್‌ಗೆ ಎಂಟ್ರಿ ಕೊಡಬಹುದು. ಹೀಗಾಗಿ ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಪಾಯಿಂಟ್ ಟೇಬಲ್‌ನಲ್ಲಿ ನಾಲ್ಕನೇ ಸ್ನಾನಕ್ಕೇರುವ ತವಕದಲ್ಲಿ ಆರ್‌ಸಿಬಿ ಇದೆ. ಹಾಗಾಗಿ ಆರ್‌ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವೆ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

RELATED ARTICLES

Related Articles

TRENDING ARTICLES