Monday, December 23, 2024

ಹಸೆಮಣೆ ಏರಿದ ನಿಕ್ಕಿ ಗಲ್ರಾನಿ

ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ, ಆದಿ ಪಿನಿಸೆಟ್ಟಿ ಜತೆ ಹಸೆಮಣೆ ಏರಿದ್ದಾರೆ. ಇತ್ತೀಚೆಗಷ್ಟೇ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದ ಈ ಜೋಡಿ ಸದ್ದಿಲ್ಲದೇ ಇಬ್ಬರೂ ಹಸೆಮಣೆ ಏರಿದ್ದಾರೆ.

ಕನ್ನಡ ಸೇರಿದಂತೆ ಸಾಕಷ್ಟು ಸಿನಿಮಾಗಳ ಮೂಲಕ ಬಹುಭಾಷಾ ನಟಿಯಾಗಿ ನಿಕ್ಕಿ ಗಲ್ರಾನಿ ಮಿಂಚ್ತಿದ್ದಾರೆ. ಇದೀಗ ಬಹುಕಾಲದ ಗೆಳೆಯ ಆದಿ ಪಿನಿಸೆಟ್ಟಿ ಜತೆ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ ಮದುವೆ ಆಗಿದ್ದಾರೆ. ಗುರು ಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ಖ್ಯಾತ ನಟ ಆದಿ ಪಿನಿಸೆಟ್ಟಿ ಜತೆ ನಿಕ್ಕಿ ಹಸೆಮಣೆ ಏರಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ನವದಂಪತಿಗೆ ಶುಭಾಶಯಗಳು ಹರಿದು ಬರುತ್ತಿದೆ.

ನಿಕ್ಕಿ ಮತ್ತು ಆದಿ ಹಲವು ವರ್ಷಗಳಿಂದ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ನಿಕ್ಕಿ ಮತ್ತು ಆದಿ ಗುರುಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಕುಟುಂಬದ ಮತ್ತು ಸಿನಿಮಾ ರಂಗದ ಸ್ನೇಹಿತರ ಸಮ್ಮುಖದಲ್ಲಿ ಸದ್ದಿಲ್ಲದೇ ಹಸೆಮಣೆ ಏರಿದ್ದಾರೆ. ಮೇ 18ರಂದು ಅರಿಶಿಣ ಶಾಸ್ತ್ರ ನೆರವೇರಿತ್ತು. ಇಂದು ನಿಕ್ಕಿ ಮತ್ತು ಆದಿ ಪಿನಿಸೆಟ್ಟಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮದಲ್ಲಿ ನ್ಯಾಚುರಲ್ ಸ್ಟಾರ್ ನಾನಿ ಕೂಡ ಭಾಗಿದ್ದಾರೆ.

RELATED ARTICLES

Related Articles

TRENDING ARTICLES