Monday, December 23, 2024

ಪಂಜಾಬ್​​​ನಲ್ಲಿ ಕಾಂಗ್ರೆಸ್​​​​ಗೆ ಮತ್ತೆ ಶಾಕ್

ಪಂಜಾಬ್​ : ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಸುನಿಲ್ ಜಾಖರ್ ದೆಹಲಿಯಲ್ಲಿ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ಇದು ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಹೊಡೆತವಾಗಿದೆ.

ಜಾಖರ್ ಅವರು ಬೇರೆ ರಾಜ್ಯದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಬಹುದು ಮತ್ತು ಪಂಜಾಬ್‌ನ ಪಕ್ಷದ ಜವಾಬ್ದಾರಿಯನ್ನು ಸಹ ಹಸ್ತಾಂತರಿಸಬಹುದು ಎಂದು ಮೂಲಗಳು ಹೇಳುತ್ತಿವೆ. ಜಾಖರ್ ಅವರನ್ನು ಬಿಜೆಪಿ ತೆಕ್ಕೆಗೆ ಸ್ವಾಗತಿಸಿದ ಜೆಪಿ ನಡ್ಡಾ, ಅವರು ತಮ್ಮ ರಾಜಕೀಯ ಜೀವನದಲ್ಲಿ ಸ್ವತಃ ಹೆಸರು ಮಾಡಿದ ಅನುಭವಿ ರಾಜಕೀಯ ನಾಯಕರಾಗಿದ್ದಾರೆ. ಪಂಜಾಬ್‌ನಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES