ನವದೆಹಲಿ: ಭಾರಿ ಕುತೂಹಲ ಕೆರಳಿಸಿದ್ದ ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿತ್ತು. ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋಗ್ರಾಫಿಕ್ ಸಮೀಕ್ಷೆಗೆ ನಿರ್ದೇಶಿಸಿದ ವಾರಣಸಿ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಅಂಜುಮನ್ ಇಂತೇಜಾಮಿಯಾ ಮಸಜೀದ್ ಸಮಿತಿಯ ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದಂತೆ ಆಯೋಗದ ವರದಿಯು ಸೋರಿಕೆಯಾಗಲು ಸಾಧ್ಯವಿಲ್ಲ ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ವಿಷಯವನ್ನು ಸೋರಿಕೆ ಮಾಡಬೇಡಿ, ನ್ಯಾಯಾಧೀಶರು ಮಾತ್ರ ವರದಿಯನ್ನು ತೆರೆಯುತ್ತಾರೆ ಎಂದು ಹೇಳಿತು.
ಜ್ಞಾನವಾಪಿ ಮಸೀದಿ ಪ್ರಕರಣ ಸಂಬಂಧ ಅಂಜುಮನ್ ಇಂತೇಜಾಮಿಯಾ ಮಸಜಿದ್ ಸಮಿತಿಯ ಮನವಿಯನ್ನು ಜಿಲ್ಲಾ ನ್ಯಾಯಾಧೀಶರು ಮೊಕದ್ದಮೆಯ ವರ್ಗಾವಣೆಗೆ ಆದ್ಯತೆ ಮೇಲೆ ನಿರ್ಧರಿಸುತ್ತಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಶಿವಲಿಂಗ ಪ್ರದೇಶದ ರಕ್ಷಣೆ ಮತ್ತು ನಮಾಜ್ ಮಾಡಲು ಮುಸ್ಲಿಮರಿಗೆ ಉಚಿತ ಪ್ರವೇಶಕ್ಕಾಗಿ ಮೇ 17ರ ಮಧ್ಯಂತರ ಆದೇಶ ಮುಂದುವರಿಯುತ್ತದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಸುಪ್ರೀಂಕೋರ್ಟ್ ನಲ್ಲಿ ವಕೀಲರು ಮಂಡಿಸಿದ ವಾದ ನಮ್ಮ ಪ್ರಕಾರ ಶಿವಲಿಂಗವಲ್ಲ ಕಾರಂಜಿ, ವಾಜು ಖಾನಾವನ್ನು ಸೀಲ್ ಮಾಡಲಾಗಿದೆ. ಕಬ್ಬಿಣದ ಗೇಟ್‌ಗಳನ್ನು ಬಿಗಿ ಪೊಲೀಸ್ ಉಪಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ಮಸಜಿದ್ ಕಮಿಟಿ ಪರ ಹಿರಿಯ ವಕೀಲ ಹುಝೆಫಾ ಅಹ್ಮದಿಯವರು ಸುಪ್ರೀಂ ಕೋರ್ಟ್ಗೆ ತಿಳಿಸಿದರು.
400 ವರ್ಷಗಳ ಹಿಂದೆ ದೇವಾಲಯ ಕೆಡವಿರುವ ಬಗ್ಗೆ ಉಲ್ಲೇಖ ಉತ್ತರ ಪ್ರದೇಶದ ಜ್ಞಾನವಾಪಿ ಸಂಕೀರ್ಣದಲ್ಲಿರುವ ಮಸೀದಿಗೆ ಸಂಬಂಧಿಸಿದಂತೆ ಮೊದಲಿನಿಂದಲೂ ವಿವಾದವಿದೆ. 400 ವರ್ಷಗಳ ಹಿಂದೆ ದೇವಾಲಯವನ್ನು ಕೆಡವಿ ಅಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು, ಅಲ್ಲಿ ಮುಸ್ಲಿಂ ಸಮುದಾಯದವರು ನಮಾಜ್ ಮಾಡುತ್ತಾರೆ ಎಂದು ಹಿಂದುಗಳು ಆರೋಪ ಮಾಡ್ತಿದ್ದಾರೆ.
ಜ್ಞಾನವಾಪಿ ಮಸೀದಿಯನ್ನು ಅಂಜುಮನ್-ಎ-ಇಂತಜಾಮಿಯಾ ಸಮಿತಿಯು ನಡೆಸುತ್ತಿದೆ. ಈ ಬಗ್ಗೆ 1991ರಲ್ಲಿ ವಾರಣಾಸಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ಹಿಂದೆ ವಿಶ್ವನಾಥ ದೇವರ ದೇಗುಲವಿದ್ದು, ಶೃಂಗಾರ್ ಗೌರಿಯನ್ನು ಪೂಜಿಸಲಾಗುತ್ತಿತ್ತು ಎನ್ನಲಾಗಿದೆ. ಜ್ಞಾನವಾಪಿ ಸಂಕೀರ್ಣವನ್ನು ಮುಸ್ಲಿಂ ಕಡೆಯಿಂದ ತೆರವು ಮಾಡಿ ಹಿಂದೂಗಳ ಸುಪರ್ದಿಗೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ವಾರಣಾಸಿಯ ಜ್ಞಾನವಾಪಿ ಕಾಂಪ್ಲೆಕ್ಸ್‌ನಲ್ಲಿರುವ ಬಾಬಾ ವಿಶ್ವನಾಥನ ದೇವಸ್ಥಾನ ಮತ್ತು ಮಸೀದಿಗೆ ಸಂಬಂಧಿಸಿದ ವಿವಾದ ಇದಾಗಿದ್ದು, ಸದ್ಯ ಪ್ರಕರಣ ವಿಚಾರ ಮತ್ತೆ ಉತ್ತರ ಪ್ರದೇಶದ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಗೆಯಾಗಿದೆ.