Sunday, November 24, 2024

ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ

ಚಾಮರಾಜನಗರ: ಹಲವು ದಿನಗಳಿಂದ ಪರಿಶಿಷ್ಟ ಪಂಗಡ(ಎಸ್​ಟಿ)ಕ್ಕೆ 7.5ರಷ್ಟು ಮೀಸಲಾತಿ ಹೆಚ್ಚಳಕ್ಕಾಗಿ ಸಮುದಾಯ ಮುಖಂಡರು ಹಾಗೂ ಪ್ರಗತಿ ಪರ ಹೋರಾಟಗಾರರು ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿದ್ದಾರೆ.

ಮೀಸಲಾತಿ ಹೆಚ್ಚಳಕ್ಕೆ ರಾಜ್ಯಾದ್ಯಂತ ನಡೆಯುತ್ತಿರುವ ಹೋರಾಟಕ್ಕೆ ಇಂದು ಚಾಮರಾಜನಗರ ಜಿಲ್ಲೆಯಲ್ಲಿಯೂ ಸಹ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಡಳಿತ ಭವನದವರವಿಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕರರು ಬಳಿಕ ಮುತ್ತಿಗೆ ಹಾಕಿದ್ದಾರೆ.

ಇನ್ನು ಮೀಸಲಾತಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ರಾಜಹಳ್ಳಿ ವಾಲ್ಮೀಕಿ ಶ್ರೀಗಳ ಹೋರಾಟಕ್ಕೆ ಜಿಲ್ಲಾ ನಾಯಕ ಸಮುದಾಯದವರು ಬೆಂಬಲ ನೀಡಿದ್ದಾರೆ. ಈ ಹೋರಾಟಕ್ಕೆ ಜಿಲ್ಲೆಯ ಪ್ರಗತಿಪರ ಹೋರಾಟಗಾರರು ಸಹ ಕೈಜೋಡಿಸಿದ್ದಾರೆ.

ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ.3 ರಿಂದ 7.5ರಷ್ಟು ಹೆಚ್ಚಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುಂತೆ ಮುಖಂಡರು ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ.

RELATED ARTICLES

Related Articles

TRENDING ARTICLES