Monday, December 23, 2024

ರಾಜ್ಯದಲ್ಲೂ ಪೆಟ್ರೋಲ್, ಡೀಸೆಲ್ ದರ ಇಳಿಕೆ ಆಗುತ್ತಾ..?

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಕುರಿತು ಪರಿಶೀಲನೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದಾವೋಸ್ ಪ್ರವಾಸಕ್ಕೆ ತೆರಳುವ ಮುನ್ನ ಆರ್.ಟಿ.ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಹಿಂದೆಯೂ ಕೇಂದ್ರ ಸರ್ಕಾರ ತೈಲದ ಮೇಲಿನ ಸುಂಕ ಕಡಿತಗೊಳಿಸಿದಾಗ ರಾಜ್ಯ ಸರ್ಕಾರ ತೆರಿಗೆ ಕಡಿತಗೊಳಿಸಿತ್ತು. ಹಾಗಾಗಿ ಈ ಬಾರಿಯೂ ತೆರಿಗೆ ಕಡಿತದ ನಿರೀಕ್ಷೆ ಇದೆ.ಇಂದು ಸ್ವಿಟ್ಜರ್ಲೆಂಡ್​​​ನ ದಾವೋಸ್​​​ಗೆ ತೆರಳುತ್ತಿದ್ದು ನಾಳೆ ಮತ್ತು 24ರಂದು ನಡೆಯಲಿರುವ ‘ವಿಶ್ವ ಆರ್ಥಿಕ ಶೃಂಗ’ದಲ್ಲಿ ಭಾಗಿಯಾಗುತ್ತೇನೆ. ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗುವೆ. ಹೂಡಿಕೆದಾರರನ್ನು ಸೆಳೆಯಲು ಎಲ್ಲ ಪ್ರಯತ್ನ ನಡೆಸಲಾಗುತ್ತದೆ ಎಂದು ಸಿಎಂ ಹೇಳಿದರು.

RELATED ARTICLES

Related Articles

TRENDING ARTICLES