ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ, ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಲಿಂಗಾಯತರ ಕೋಟದಡಿಯಲ್ಲಿ ಪರಿಷತ್ ಟಿಕೆಟ್ ನೀಡಲಾಗಿದೆ.
ಇನ್ನು ಮಹಿಳಾ ಕೋಟದಡಿಯಲ್ಲಿ ಕೊಪ್ಪಳ ಮೂಲದ ಲಂಬಾಣಿ ಸಮುದಾಯದ ಹೇಮಲತಾ ನಾಯಕ್, ಹಿಂದುಳಿದ ವರ್ಗ ಕೋಟಾದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿದ್ದ ಕೇಶವ ಪ್ರಸಾದ್, ದಲಿತರ ಕೋಟದಲ್ಲಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ದೊರೆತಿದೆ.
ಜೊತೆಗೆ ವಿಧಾನ ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿಗೆ ಟಿಕೆಟ್ ನೀಡಲಾಗಿದೆ. ಇತ್ತೀಚೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಹೊರಟ್ಟಿ ಅವರಿಗೆ ಹೈಕಮಾಂಡ್ ನೀಡಿದ ಭರವಸೆಯಂತೆ ಟಿಕೆಟ್ ಕೊಟ್ಟಿದೆ.
ಪ್ರಧಾನಿ ಮೋದಿ ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣಕ್ಕೆ ಮನ್ನಣೆ ನೀಡುವುದಿಲ್ಲ ಎಂಬುದನ್ನು ಮೇ 20ರಂದೇ ಸುಳಿವು ನೀಡಿದ್ದರು. ಆದರೆ, ಇದು ಯಾವುದರ ಪರಿವೇ ಇಲ್ಲದೆ ರಾಜ್ಯ ನಾಯಕರು ಬಿಎಸ್‌ವೈ ಪುತ್ರನಿಗೆ ರಾಜಕೀಯ ಭವಿಷ್ಯ ಕಲ್ಪಿಸಲು ತೆರೆ ಮರೆಯ ಕಸರತ್ತನ್ನು ಮುಂದುವರಿಸಿದ್ದರು. ವಿಧಾನ ಪರಿಷತ್‌ಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಘೋಷಿಸಿದೆ. ಆದರೆ, ಬಿ.ವೈ.ವಿಜಯೇಂದ್ರ ಅವರ ಕನಸು ನುಚ್ಚುನೂರಾಗಿದೆ.
ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ. pic.twitter.com/DkKh8J0Enp
— BJP Karnataka (@BJP4Karnataka) May 24, 2022
Congratulations to Shri Chaluvadi Narayanaswamy, Smt Hemalatha Nayak, Shri Keshavaprasad and Shri @LaxmanSavadi on being selected @BJP4Karnataka candidates for the upcoming elections to Karnataka Legislative Council. (1/2)@JPNadda @AmitShah @blsanthosh @JoshiPralhad
— Vijayendra Yeddyurappa (@BYVijayendra) May 24, 2022