Wednesday, January 22, 2025

ವಿಧಾನಪರಿಷತ್ ಚುನಾವಣೆಗೆ JDS ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ತಿನ 7 ಸ್ಥಾನಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಯಲ್ಲಿ  ಜೆಡಿಎಸ್ ಪಕ್ಷವು ತನ್ನ ಅಭ್ಯರ್ಥಿ ಪಟ್ಟಿ ಪ್ರಕಟಿಸಿದೆ.

ವಿಧಾನಪರಿಷತ್ ಚುನಾವಣೆಗೆ JDS ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಂತ ಸಿಎಂ ಇಬ್ರಾಹಿಂ ಅವರಿಗೆ ಜೆಡಿಎಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಗೆ ಟಿಕೆಟೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು.

ಕೊನೆಯ ಕ್ಷಣದಲ್ಲಿ ಟಿ.ಎ ಶರವಣ ಅವರಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಲಾಗಿದೆ. ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನ ಪರಿಷತ್ 7 ಸ್ಥಾನಗಳ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲು ಕೊನೆಯ ಕ್ಷಣವಾಗಿತ್ತು. ಮಾಜಿ ಪರಿಷತ್ ಸದಸ್ಯ ಟಿ.ಎ ಶರವಣ ಅವರಿಗೆ, ಮತ್ತೆ ವಿಧಾನ ಪರಿಷತ್ ಚುನಾವಣೆಗಾಗಿ ಟಿಕೆಟ್ ನೀಡಲಾಗಿದೆ.

ಜೆಡಿಎಸ್ ವರಿಷ್ಠ ಹೆಚ್. ಡಿ. ಕುಮಾರಸ್ವಾಮಿಯವರು ಅವರಿಗೆ ಇಂದು ಬಿ ಫಾರಂ ಕೂಡ ವಿತರಿಸಿದರು. ಈ ಬಳಿಕ ಟಿ.ಎ ಶರವಣ ಅವರು ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದುವಾರಿಕೆ ಪತ್ರವನ್ನು ಸಲ್ಲಿಸಿದರು.

ಎರಡನೇ ಬಾರಿಗೆ ಪರಿಷತ್ ಪ್ರವೇಶಿಸಲಿರುವ ಟಿ. ಎ ಶರವಣ ಅವರ  ಹೆಸರನ್ನು ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ತನ್ನ ಇಬ್ಬರು ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿತ್ತು. ಬಿಜೆಪಿ ನಾಲ್ವರು ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ (ಇಂದು) ಪ್ರಕಟಿಸಿದೆ.

RELATED ARTICLES

Related Articles

TRENDING ARTICLES