Friday, September 20, 2024

ರಾಜ್ಯದಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರ್ನಾಟಕ ಕರಾವಳಿ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ತುಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಕರ್ನಾಟಕದ ಕರಾವಳಿ, ಉತ್ತರ ಕರ್ನಾಟಕ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RELATED ARTICLES

Related Articles

TRENDING ARTICLES