Monday, December 23, 2024

‘ನಾಡಗೀತೆಗೆ ಅವಮಾನಿಸಿದವನನ್ನ ಒದ್ದು ಒಳಗೆ ಹಾಕಿ’ : ಹೆಚ್​ಡಿಕೆ

ಮೈಸೂರು: ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಯನ್ನು ಅವಮಾನಿಸಿದವನನ್ನು ಮೊದಲು ಒದ್ದು ಒಳಕ್ಕೆ ಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಪಠ್ಯಪುಸ್ತಕ ವಿಚಾರದಲ್ಲಿ ಗೊಂದಲವಿದೆ. ನಾಡಗೀತೆ ವಿಚಾರದಲ್ಲಿ ಹಲವು ರೀತಿ ಕೆಟ್ಟ ಬೆಳೆವಣಿಗೆಗಳಾಗುತ್ತಿವೆ. ನಾಡಗೀತೆಗೆ ಅವಮಾನ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಹೆಸರೇಳದೆ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ, ಹಿಂದೆ ಸಾಮಾಜಿಕ ಜಾಲತಾಣದಲ್ಲಿ ನಾಡಗೀತೆ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ವ್ಯಕ್ತಿಯನ್ನು ಸಮಿತಿ ಅಧ್ಯಕ್ಷನನ್ನಾಗಿ ಮಾಡಿರುವುದೇ ತಪ್ಪು. ಕುವೆಂಪು ಮತ್ತು ನಾಡಗೀತೆಗೆ ಅಪಮಾನ ಮಾಡಿದರೆ ಸುಮ್ಮನಿರುವುದಿಲ್ಲ. ನಾಡಗೀತೆ, ಕುವೆಂಪು ಅವರನ್ನು ಅಪಮಾನಿಸಿದ ಅವನನ್ನು ಮೊದಲು ಒದ್ದು ಒಳಕ್ಕೆ ಹಾಕಬೇಕು ಎಂದು ಆಗ್ರಹಿಸಿದರು

RELATED ARTICLES

Related Articles

TRENDING ARTICLES