Wednesday, January 22, 2025

7ನೇ ತರಗತಿ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ತುಮಕೂರು : ಇಂಗ್ಲಿಷ್‌ ಓದಲು ಕಷ್ಟವಾಗುತ್ತೆ ಎಂದು ಆತ್ಮಹತ್ಯೆ ಯತ್ನಿಸಿದ ಘಟನೆ ತುಮಕೂರು ತಾಲೂಕಿನ ಊರ್ಡಿಗೆರೆಯಲ್ಲಿ ನಡೆದಿದೆ.

ಊರ್ಡಿಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಇಂಗ್ಲಿಷ್ ಓದಲು ಕಷ್ಟವಾಗುತ್ತೆ ಶಾಲೆಗೆ ಹೋಗಲ್ಲ ಎಂದು ಹಠ ಮಾಡಿದ್ದಾನೆ. ಆದರೆ ಪೋಷಕರು ಶಾಲೆಗೆ ಹೋಗುವಂತೆ ಹೇಳಿದರು. ಆದರೆ ಬಾಲಕ ಶಾಲೆಗೆ ಹೋಗುವುದಿಲ್ಲ ಎಂದು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ್ದಾನೆ. ಮನೆಯಲ್ಲಿ ಕುಸಿದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತುಮಕೂರು ನಗರದ ಕೋತಿ ತೋಪು ಮೂಲದ ಸೋಮಶೇಖರ್, ಜಯಮ್ಮ ದಂಪತಿಯ ಮಗನಾದ ಇವನು ಕೂಲಿ ಕೆಲಸ ನಿಮಿತ್ತ ಊರ್ಡಿಗೆರೆ ಗ್ರಾಮಕ್ಕೆ ವಲಸೆ ಕುಟುಂಬಸ್ಧರು ಬಂದಿದ್ದಾರೆ. ಕೋತಿತೋಪು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ್ದ ಬಾಲಕ. 7ನೇ ತರಗತಿಗೆ ಊರ್ಡಿಗೆರೆಯಲ್ಲಿ ಸೇರ್ಪಡೆಗೊಂಡಿದ್ದಾನೆ.

RELATED ARTICLES

Related Articles

TRENDING ARTICLES