Wednesday, January 22, 2025

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ED ಕಂಟಕ..!

ಬೆಂಗಳೂರು: 2018ರಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಆಪ್ತರ ನಿವಾಸಗಳ ಮೇಲೆ ಐಟಿ ದಾಳಿ ಮಾಡಲಾಗಿತ್ತು. ಬಳಿಕ ಈ ಪ್ರಕರಣ ಜಾರಿ ನಿರ್ದೇಶನಾಲಯ ವರ್ಗಾವಣೆಯಾಗಿತ್ತು. ಇದೀಗ, ಇಡಿ ಅಧಿಕಾರಿಗಳು ದೆಹಲಿ ವಿಶೇಷ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಎರಡೂವರೆ ವರ್ಷದ ಬಳಿಕ ಚಾರ್ಜ್‌ಶೀಟ್ ಸಲ್ಲಿಕೆಯಾಗಿದ್ದು, ರಾಜಕೀಯ ವಲಯದಲ್ಲಿ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 2018ರಲ್ಲಿ ನಡೆದ ಗುಜರಾತ್ ಚುನಾವಣೆ ಸಂದರ್ಭದಲ್ಲಿ ಅಹ್ಮದ್ ಪಟೇಲ್ ಗೆಲುವಿಗಾಗಿ ಶಾಸಕರಿಗೆ ಡಿ.ಕೆ.ಶಿವಕುಮಾರ್ ರಕ್ಷಣೆ ನೀಡಿದ್ದರು. ಗುಜರಾತಿನಿಂದ ಕರೆತಂದು ಬೆಂಗಳೂರಿನ ಈಗಲ್ಟನ್ ರೆಸಾರ್ಟ್‌ನಲ್ಲಿ ಉಳಿಸಿಕೊಂಡು, ಅಹ್ಮದ್ ಪಟೇಲ್ ಗೆಲುವಿಗೆ ಮುತುವರ್ಜಿ ವಹಿಸಿದ್ದರು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ನಿವಾಸ ಹಾಗೂ ಆಪ್ತರ ನಿವಾಸದ ಮೇಲೆ ಐಟಿ ದಾಳಿ ನಡೆದಿತ್ತು. ಆಗ ಡಿಕೆಶಿ ದೆಹಲಿ ನಿವಾಸದ ಸುಮಾರು 8 ಕೋಟಿ ರೂಪಾಯಿ ಪತ್ತೆಯಾಗಿತ್ತು.

ಡಿ.ಕೆ.ಶಿವಕುಮಾರ್ ದೆಹಲಿಯ ನಿವಾಸದಲ್ಲಿ ನಗದು ಪತ್ತೆಯಾದ ಬಳಿಕ ಹಲವು ಸುತ್ತಿನ ವಿಚಾರಣೆಗಳಿಗೆ ಡಿ.ಕೆ. ಶಿವಕುಮಾರ್ ಹಾಜರಾಗಿದ್ದರು. ಈ ವೇಳೆ ಡಿಕೆಶಿ ಪರ ವಕೀಲರು ಹಲವು ಸಾಕ್ಷಾಧಾರಗಳನ್ನು ನೀಡಿದ್ದರು. ಆದರೆ ಹಲವು ಸುತ್ತಿನ ವಿಚಾರಣೆಯ ನಂತರ ದೆಹಲಿಗೆ ಕರೆಸಿಕೊಂಡಿದ್ದ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿದ್ದರು. ಸುಮಾರು ಒಂದು ತಿಂಗಳಿಗೂ ಅಧಿಕ ಕಾಲ ತಿಹಾರ್ ಜೈಲಿನಲ್ಲಿದ್ದ ಡಿ.ಕೆ. ಶಿವಕುಮಾರ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಎರಡೂವರೆ ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, ರಾಜಕೀಯ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ವಿಶ್ ದೆಮ್ ಆಲ್ ದಿ ಬೆಸ್ಟ್ ಎಂದು ವ್ಯಂಗ್ಯವಾಡಿದ್ರು.

ಇನ್ನೂ ಕಳೆದ ಕೆಲ ದಿನಗಳ ಹಿಂದೆಯೇ, ಮತ್ತೊಮ್ಮೆ ನನ್ನ ಜೈಲಿಗೆ ಕಳಿಸುವ ಪ್ರಯತ್ನ ನಡೆಸಲಾಗುತ್ತದೆ ಎಂದು ಸ್ವತಃ ಡಿ.ಕೆ.ಶಿವಕುಮಾರ್ ಹೇಳಿದ್ದರು. ಇದಾದ ಸ್ವಲ ದಿನಗಳ ನಂತರ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಇದೊಂದು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಚುನಾವಣೆ ಹೊತ್ತಿಗೆ ಡಿಕೆಶಿಯವರನ್ನು ಜೈಲಿಗೆ ಕಳಿಸುವ ಪ್ರಯತ್ನ ಬಿಜೆಪಿಯವರು ಮಾಡಿದ್ದಾರೆ ಎಂದು ಕಾಂಗ್ರೆಸ್ ಪಡಸಾಲೆಯಲ್ಲಿ ಚರ್ಚೆ ಶುರುವಾಗಿದೆ. ಈ ದೋಷಾರೋಪ ಪಟ್ಟಿ ಸಲ್ಲಿಕೆ ಬಗ್ಗೆ ಮಾತಾಡಿರುವ ಡಿಕೆಶಿ ಸಹೋದರ ಡಿಕೆ ಸುರೇಶ್, ರಾಜಕೀಯ ಪ್ರೇರಿತವಾಗಿ ನಮ್ಮ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಇದರ ವಿರುದ್ಧ ನಮ್ಮ ಕಾನೂನು ಹೋರಾಟ ನಡೆಯುತ್ತಿರುತ್ತದೆ. ನಾವು ಹೆದರುವ ಪ್ರಶ್ನೆಯೇ ಇಲ್ಲ. ಏನೇ ಷಡ್ಯಂತ್ರ ಮಾಡಿದರೂ ನಾವು ಹೆದರುವುದಿಲ್ಲ. ನಾವು ಎಲ್ಲದಕ್ಕೂ ಸಿದ್ಧ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು

ಒಟ್ಟಿನಲ್ಲಿ ಚುನಾವಣೆ ವರ್ಷದಲ್ಲಿ ಇಡಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಇದರಿಂದ ಡಿ.ಕೆ.ಶಿವಕುಮಾರ್‌ಗೆ ಒಂದಷ್ಟು ಕಾನೂನು ತೊಡಕುಗಳು ಎದುರಾಗುತ್ತವೆ. ಡಿಕೆಶಿ ಕಾನೂನು ತೊಡಕುಗಳ ಬಗ್ಗೆ ಹೆಚ್ಚಿನ ಗಮನ ಹರಿಸಿದ್ರೆ, ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ಡ್ಯಾಮೇಜ್ ಆಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.

RELATED ARTICLES

Related Articles

TRENDING ARTICLES