ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭ ತಮ್ಮ ಭಾಷಣದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ನೀಡಿದ ಹೇಳಿಕೆಗೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವಿಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.
“ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು.” ಪ್ರಧಾನಿ ಅವರ ಹೊಸ ಉಪದೇಶವಿದು. ವಾಸ್ತವ ಗುರುತಿಸಿ, ಬೆಳವಣಿಗೆಯ ಹಿನ್ನೆಲೆ ಅರಿತು ಅವರು ಭಾಷಣ ಮಾಡಬೇಕಿತ್ತು. ಕೇವಲ ಚುನಾವಣಾ ಪ್ರಚಾರ ಶೈಲಿಯ ಭಾಷಣ ಮಾಡಿದ್ದಾರಷ್ಟೇ ಎಂದು ಹೇಳಿದರು. ಅಲ್ಲದೇ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಸ್ಥಾನವನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಇಟ್ಟಿದ್ದು ಯಾರು? ಕುಟುಂಬ ರಾಜಕಾರಣದ ಪಕ್ಷವೋ? ಬಿಜೆಪಿಯೋ? “ರೂ.2,500 ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡುತ್ತೇವೆ” ಎಂದು ಕೇಳಿದ ಪಾರ್ಟಿ ಬಿಜೆಪಿ. ಇದನ್ನು ಹೇಳಿದ್ದು ನಾವಲ್ಲ, ಸ್ವತಃ ಬಿಜೆಪಿ ಶಾಸಕರೇ!! ಆ ಶಾಸಕರ ಮೇಲೆ ಶಿಸ್ತುಕ್ರಮ ಇರಲಿ, ಒಂದು ನೊಟೀಸನ್ನೂ ಕೊಡಲಿಲ್ಲ ಎಂದು ಕಿಡಿಕಾರಿದರು.
ಮೋದಿ ಅವರೂ ಸಿಎಂ ಕರ್ಚಿ ಮಾರಾಟದ ಬಗ್ಗೆ ಮಾತನಾಡಲಿಲ್ಲ. ಈ ಘನಘೋರ ಆರೋಪದ ಬಗ್ಗೆಯೂ ಅವರದ್ದು ಮುಂದುವರಿದ ಮೌನ! ಅಲ್ಲಿಗೆ ಶಾಸಕರ ಹೇಳಿಕೆ ಸತ್ಯ ಎಂದಾಯಿತಲ್ಲ. ಪಿಎಸ್ʼಐ ಹುದ್ದೆಗಳಂತೆ ಸಿಎಂ ಪದವಿಯನ್ನೂ ಮಾರಿಕೊಳ್ಳುವುದು ದೇಶಕ್ಕೆ ಸೌಭಾಗ್ಯವಾ? ಯುವಕರಿಗೆ ಆದರ್ಶವಾ? ಎಂದು ವಾಗ್ದಾಲಿ ನಡೆಸಿದರು.
ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳೇ. ಇಂಥ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ ಅಡ್ಡದಾರಿ ಹಿಡಿಯಿತು ಎನ್ನುವುದು ಗುಟ್ಟೇನಲ್ಲ ಎಂದಿದ್ದಾರೆ.
ʼಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ? ಜನಾದೇಶದಂತೆ ರಚನೆಯಾಗಿದ್ದ ಮಧ್ಯಪ್ರದೇಶದ ಸರಕಾರವನ್ನು ಕೆಡವಿದ್ದು ಇವರ ಪಕ್ಷವೇ ಅಲ್ಲವೆ? 13/17
— H D Kumaraswamy (@hd_kumaraswamy) May 27, 2022