Monday, December 23, 2024

ಕಾಂಗ್ರೆಸ್​​ಗೆ ಮುಖ್ಯಮಂತ್ರಿ‌ ಚಂದ್ರು ರಿಸೈನ್

ಬೆಂಗಳೂರು :  ರಾಜ್ಯಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಕೈ ಪಕ್ಷದ ಹಿರಿಯ ಮುಖಂಡ, ನಟ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​​ಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಪತ್ರದ ಮೂಲಕ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದರು.

ದೇಶದಲ್ಲೇ ಸುಧೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ನಾನು ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಗೊಂಡೆ. ಪಕ್ಷಕ್ಕೆ ಸೇರಿದ ದಿನದಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂಬ ತೃಪ್ತಿ ಇದೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES