Sunday, January 12, 2025

ಗುಂಡಿಕ್ಕಿ ಶಿಕ್ಷಕಿಯನ್ನು ಹತ್ಯೆಗೈದ ಉಗ್ರರು

ಜಮ್ಮು-ಕಾಶ್ಮೀರ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಅಟ್ಟಹಾಸ ಮುಂದುವರೆದಿದ್ದು, ಇಂದು ಕುಲ್ಗಾಮ್ ನಲ್ಲಿ ಹಿಂದೂ ಶಿಕ್ಷೆಕಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ.

ಹಿಂದೂಗಳನ್ನು ಗುರಿಯಾಗಿಸಿ ಹತ್ಯೆ ಮಾಡುವ ಪ್ರಕರಣಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದುವರಿದಿದ್ದು, ಇಂದು ಕುಲ್ಗಾಂ ಜಿಲ್ಲೆಯ ಗೋಪಾಲ್ ಪೋರಾ ಪ್ರದೇಶದಲ್ಲಿ ಹಿಂದೂ ಧರ್ಮಕ್ಕೆ ಸೇರಿದ ಶಿಕ್ಷಕಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಮೃತರನ್ನು ರಾಜ್​ನಿ ಬಲ್ಲಾ ಎಂದು ಗುರುತಿಸಲಾಗಿದೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಶಿಕ್ಷಕಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ತಕ್ಷಣ ಚಿಕಿತ್ಸೆ ಕೊಡುವ ಪ್ರಯತ್ನ ಮಾಡಿದರಾದರೂ ಶಿಕ್ಷಕಿಯ ಜೀವ ಉಳಿಯಲಿಲ್ಲ. ಈ ನೀಚ ಕೃತ್ಯ ಎಸಗಿದ ಉಗ್ರರನ್ನು ಶೀಘ್ರ ಪತ್ತೆ ಹಚ್ಚಿ, ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಕುಲ್ಗಾಮ್​ನ ಗೋಪಾಲಪುರ ಪ್ರದೇಶದಲ್ಲಿರುವ ಪ್ರೌಢಶಾಲೆಯಲ್ಲಿ ಈ ಪ್ರಕರಣ ನಡೆದಿದ್ದು, ಸದ್ಯಕ್ಕೆ ಪೊಲೀಸರು ಈ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

RELATED ARTICLES

Related Articles

TRENDING ARTICLES