Sunday, January 19, 2025

ಭೀಕರ ರಸ್ತೆ ಅಪಘಾತ : ಬೈಕ್ ಸವಾರನಿಗೆ ಗಂಭೀರ ಗಾಯ

ತುಮಕೂರು : ಅತೀ ವೇಗವಾಗಿ ಬಂದ ಕಾರೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ತುಮಕೂರು ಹೊರವಲಯದ ಶೆಟ್ಟಿಹಳ್ಳಿಯ ಸಿಗ್ನಲ್‌‌ನಲ್ಲಿನ ರಿಂಗ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದೆ.

ಕಾರು ಅಪಘಾತದಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯ ಹೆಸರು ಮತ್ತು ವಿಳಾಸ ಸದ್ಯಕ್ಕೆ ಲಭ್ಯವಾಗಿಲ್ಲ. ಅಪಘಾತದ ದೃಶ್ಯ ಸಿ.ಸಿ ಟಿವಿಯಲ್ಲಿ ಸೆರೆಯಾಗಿದೆ.

ಈ ಘಟನೆ ನಡೆದದ್ದನ್ನು ಕಂಡ ಅಲ್ಲಿದ್ದ ಸ್ಥಳೀಯರು ಬೈಕ್ ಸವಾರರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.

ಇನ್ನು ಸ್ಥಳಕ್ಕೆ ಜಯನಗರ ಪೊಲೀಸರು ಹಾಗೂ ಪಶ್ಚಿಮ ವಲಯದ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES