Friday, November 22, 2024

ಒಂದೇ ಸೂರಿನಡಿ 24 ಇಲಾಖೆಗಳ ಸ್ಟಾಲ್‌ಗಳ ಸ್ಥಾಪನೆ

ಕಲಬುರಗಿ : ಜನರ ಸಮಸ್ಯೆಗಳಿಗೆ ಸ್ಥಳದಲ್ಲೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಮತ್ತು ಸರ್ಕಾರದ ಸೇವೆ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾಡಳಿತ ಮುಂದಾಗಿದೆ. ಅದಕ್ಕಾಗಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರು ವಿನೂತನವಾಗಿ ರಾಜ್ಯದಲ್ಲೆ ಮೊಟ್ಟ ಮೊದಲ ಬಾರಿಗೆ ಕಲಬುರಗಿ ಜಿಲ್ಲೆಯಲ್ಲಿ ಸ್ಪಂದನ ಕಲಬುರಗಿ ಎಂಬ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ.. ಸಾರ್ವಜನಿಕರ ಸಮಸ್ಯೆಗಳನ್ನ ಅಧಿಕಾರಿಗಳ ಸಮಕ್ಷಮದಲ್ಲಿ ಖುದ್ದಾಗಿ ಆಲಿಸಲು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಒಟ್ಟು 24 ಸ್ಟಾಲ್‌ಗಳನ್ನ ತೆರೆಯಲಾಗಿದೆ.. ಕೃಷಿ, ತೋಟಗಾರಿಕೆ, ರೇಷ್ಮೆ, ಕಂದಾಯ, ಸೇರಿ 24 ಪ್ರಮುಖ ಇಲಾಖೆಗಳ ಸಿಬ್ಬಂದಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅರ್ಜಿಗಳನ್ನ ಸ್ವೀಕರಿಸಿದ್ದಾರೆ.

ಇನ್ನು ಸಾರ್ವಜನಿಕರು ಎಲ್ಲಾ ಸಮಸ್ಯೆಗಳನ್ನು ಅಗತ್ಯ ದಾಖಲೆಗಳೊಂದಿಗೆ DC ಕಚೇರಿ ಆವರಣದಲ್ಲಿರುವ ಈ ಸ್ಟಾಲ್‌ಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.30ರವರೆಗೆ ಪರಿಹರಿಸಿಕೊಳ್ಳಬಹುದು.ಇನ್ನು ಸ್ಪಂದನ ಕಲಬುರಗಿ ವಿನೂತನ ಕಾರ್ಯಕ್ರಮ ಆಯೋಜನೆ ಬಗ್ಗೆ ಮುಂಚಿತವಾಗಿಯೇ ಜಿಲ್ಲಾಧಿಕಾರಿ ಕಚೇರಿಯಿಂದ ಪತ್ರಿಕೆಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿದ್ದರಿಂದ, ಜನಸಾಗರವೇ ಹರಿದುಬಂದಿತ್ತು.

ಒಟ್ಟಾರೆ ಸ್ಪಂದನ ಕಲಬುರಗಿಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸಬ್ಸಿಡಿ ಮೇಲೆ ಕೃಷಿ ಯಂತ್ರೋಪಕರಣಗಳು, ಟ್ರ್ಯಾಕ್ಟರ್‌ ಸೇರಿ ಹಲವು ಉಪಕರಣಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆ ಕೂಡ ಕಲ್ಪಿಸಲಾಗಿತ್ತು.

RELATED ARTICLES

Related Articles

TRENDING ARTICLES