ದೆಹಲಿ : ಕರ್ನಾಟಕದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ಅಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ಭಾರತದ ರಾಷ್ಟ್ರಧ್ವಜವಾಗುತ್ತದೆ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದರು. ಇಂಥ ಹೇಳಿಕೆ ನೀಡಿದ್ದ ಅವರನ್ನು ಬಂಧಿಸಬೇಕು ಎಂದು ಸಂಜಯ್ ಸಿಂಗ್ ಆಗ್ರಹಿಸಿದ್ದಾರೆ.
ದೆಹಲಿಯ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಗೆ ಆಪ್ ನಾಯಕ ಸಿಂಗ್ ದೂರು ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ವಾಸ್ತವವಾಗಿ, ಬಿಜೆಪಿ ರಾಷ್ಟ್ರಧ್ವಜವನ್ನು ವಿರೋಧಿಸುತ್ತದೆ ‘ರಾಷ್ಟ್ರಧ್ವಜವನ್ನು ಅವಮಾನಿಸಿರುವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವುದಷ್ಟೇ ಅಲ್ಲ, ಅವರನ್ನು ಬಂಧಿಸಬೇಕು’ ಎಂದು ಆಗ್ರಹಿಸಿದರು.
ಮುಂದೊಂದು ದಿನ ಕೇಸರಿ ಧ್ವಜ ಭಾರತದ ರಾಷ್ಟ್ರಧ್ವಜವಾಗುತ್ತದೆ ಎಂದು ಹೇಳುವ ಮೂಲಕ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ದೂರು ಸಲ್ಲಿಸಿದ್ದೇನೆ, 50 ವರ್ಷಗಳಿಗೂ ಹೆಚ್ಚು ಕಾಲ ಆರ್‌ಎಸ್‌ಎಸ್ ಕೇಂದ್ರ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸಿರಲಿಲ್ಲ. ವಾಸ್ತವವಾಗಿ, ಬಿಜೆಪಿ ರಾಷ್ಟ್ರಧ್ವಜವನ್ನು ವಿರೋಧಿಸುತ್ತದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ. ‘ರಾಷ್ಟ್ರಧ್ವಜವನ್ನು ಅವಮಾನಿಸಿರುವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವುದಷ್ಟೇ ಅಲ್ಲ, ಅವರನ್ನು ಬಂಧಿಸಬೇಕು’ ಎಂದು ಆಗ್ರಹಿಸಿದರು.