Sunday, January 19, 2025

ರಾಜ್ಯದಲ್ಲಿ 2 ದಿನ ಮಳೆ : ಯಲ್ಲೋ ಅಲರ್ಟ್

ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದ್ದು, ಮುಂದಿನ 2ರಿಂದ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನಗರದಲ್ಲಿ ಇಂದಿನಿಂದ 2 ದಿನ ಮಳೆ ಹೆಚ್ಚಾಗುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ನೈಋತ್ಯ ಮಾನ್ಸೂನ್ ಕರ್ನಾಟಕದ ಇನ್ನಷ್ಟು ಭಾಗಗಳಿಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂಗಾರು ಆಗಮನದಿಂದಾಗಿ ಕರ್ನಾಟಕದ ದಕ್ಷಿ ಣ ಒಳನಾಡು, ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ , ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲೂ ಧಾರಾಕಾರ ಮಳೆಯ ಮುನ್ಸೂಚನೆ ನೀಡಲಾಗಿದೆ.

RELATED ARTICLES

Related Articles

TRENDING ARTICLES