Thursday, December 19, 2024

ನಿವೃತ್ತ ಯೋಧನ ಮೇಲೆ ಮಾರಣಾಂತಿಕ ಹಲ್ಲೆ

ಕೋಲಾರ : ನಿವೃತ್ತ ಯೋಧನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಾಲೂರು ತಾಲೂಕಿನ ಹಳೆ ಅರಮಾಕನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಜಿ.ರಾಮಪ್ಪ, ಹಲ್ಲೆಗೊಳಗಾದ ನಿವೃತ್ತ ಯೋಧ. ಗ್ರಾಮದ ಸರ್ಕಾರಿ ಜಮೀನಿನಲ್ಲಿ ತಂಗುದಾಣ ಮಾಡಿ ಎಂದಿದ್ದಕ್ಕೆ 10 ಕ್ಕೂ ಹೆಚ್ಚು ಜನರಿಂದ ರಾಮಪ್ಪ ತಲೆ ಹಾಗೂ ಬೆನ್ನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಸದ್ಯ ಮಾಜಿ ಸೈನಿಕನಿಗೆ ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೋಲಾರದ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES