Wednesday, January 22, 2025

ಅರುಣ್‌ ಸಿಂಗ್‌ ನೇತೃತ್ವದಲ್ಲಿ ಇಂದು ಸರಣಿ ಸಭೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿರುವ ಪ್ರಯುಕ್ತ ಪ್ರಚಾರ ಅಭಿಯಾನ, ಪಕ್ಷ ಸಂಘಟನೆ, ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆ ಕುರಿತಂತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದಲ್ಲಿ ಇಂದು ಸರಣಿ ಸಭೆಗಳು ನಡೆಯಲಿದೆ.

ಪಕ್ಷದ ರಾಜ್ಯ ಘಟಕದ ಕಚೇರಿ ಜಗನ್ನಾಥ ಭವನಕ್ಕೆ ಇಂದು ಬೆಳಿಗ್ಗೆಯೇ ಬರಲಿರುವ ಅರುಣ್‌ ಸಿಂಗ್‌, ವಿವಿಧ ಜಿಲ್ಲಾ ಘಟಕಗಳ ಪ್ರಮುಖರ ಜತೆ ಆನ್‌ಲೈನ್‌ ಮೂಲಕ ಸಭೆ ನಡೆಸುವರು. ಕೇಂದ್ರ ಸರ್ಕಾರದ ಸಾಧನೆಗಳ ಕುರಿತ ಪ್ರಚಾರ ಅಭಿಯಾನದ ಪ್ರಗತಿ ಬಗ್ಗೆ ಮಾಹಿತಿ ಪಡೆಯುವರು. ಬಳಿಕ ವಿವಿಧ ಘಟಕಗಳ ಪ್ರಮುಖರ ಜತೆಗೂ ಆನ್‌ಲೈನ್‌ ಮೂಲಕ ಸಭೆ ನಡೆಸುವರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಗೆ ಸಂಬಂಧಿಸಿದಂತೆ ಅಧಿಕೃತವಾಗಿ ಯಾವುದೇ ಸಭೆ ನಿಗದಿಯಾಗಿಲ್ಲ. ಆದರೆ, ಸಚಿವರು ಮತ್ತು ಶಾಸಕರ ಜತೆ ಅನೌಪಚಾರಿಕವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

RELATED ARTICLES

Related Articles

TRENDING ARTICLES