Friday, March 29, 2024

RSS ಸುದ್ದಿಗೆ ಬಂದ್ರೆ ಸುಟ್ಟುಹೋಗ್ತಾರೆ: ನಳಿನ್​​ ಕುಮಾರ್​​ ಕಟೀಲ್

ಹುಬ್ಬಳ್ಳಿ : ರಾಜ್ಯದಲ್ಲಿ ನಡೆದ ಹತ್ತಾರು ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಬೆಂಕಿ ಹಾಕುವ ಕೆಲಸವನ್ನ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​ ಕಟೀಲ್ ಆರೋಪಿದ್ದಾರೆ.

ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗಲಭೆ ಹಿಂದೆ ಕಾಂಗ್ರೆಸ್ ಇದೆ. RSS ಒಂದು ಸೇವಾ ಸಂಸ್ಥೆ. ದೇಶ ಭಕ್ತರನ್ನ ನಿರ್ಮಾಣ ಮಾಡುವ ಸಂಸ್ಥೆ. ಇದಕ್ಕೆ ಕೈ ಹಾಕಿದ ನೆಹರು ಮತ್ತು ಇಂದಿರಾ ಗಾಂಧಿ ಸುಟ್ಟು ಹೋಗಿದ್ದಾರೆ. ಸಿದ್ದರಾಮಯ್ಯ RSS ಚಡ್ಡಿಗೆ ಬೆಂಕಿ ಹಾಕಲು ಹೇಳಿದ್ದಾರೆ, ಮುಂದೆ ಅವರೇ ಸುಟ್ಟು ಹೋಗುತ್ತಾರೆ ಎಂದು ಕಿಡಿಕಾರಿದರು.

ಅಲ್ಲದೇ ರಾಜ್ಯದಲ್ಲಿ ಅತಂತ್ರ ಸ್ಥಿತಿಯನ್ನು ಉಂಟು ಮಾಡಲು ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸಕ್ಕೆ ಮುಂದಾಗಿದೆ. ಮುಂದಿನ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಆದ ಗಲಾಟೆಗಳಿಗೆ ಅವರ ವೈಫಲ್ಯವೇ ಕಾರಣ. ರಾಜ್ಯದಲ್ಲಿ ನಡೆಯುವ ಒಳ್ಳೆಯ ಕಾರ್ಯಗಳಿಗೆ ಸಿದ್ಧರಾಮಯ್ಯ ಬೆಂಬಲ ನೀಡಲ್ಲ ಎಂದರು.

RELATED ARTICLES

Related Articles

TRENDING ARTICLES