Monday, December 23, 2024

ಪಠ್ಯ ಪುಸ್ತಕದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ : ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ : ರಾಜ್ಯ ಸಭೆ ಚುನಾವಣೆಯಲ್ಲಿ ನಮ್ಮ ಮೂರು ಅಭ್ಯರ್ಥಿಗಳು ಗೆಲ್ತಾರೆ ಎಂದು ಹುಬ್ಬಳ್ಳಿ ಸುದ್ಧಿಗೋಷ್ಠಿಯಲ್ಲಿ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು. ಕಾದು ನೋಡಿ ಬಿಜೆಪಿ ಮೂರು ಸ್ಥಾನಗಳನ್ನ ಗೆಲ್ಲುತ್ತೆ. ಕಾಂಗ್ರೆಸ್‌ಗೆ ಹಿಂದುಗಳ ಮತ ಬೇಡ ‌ಎನ್ನುವ ಹಂತಕ್ಕೆ ಬಂದು ನಿಂತಿದ್ದಾರೆ. ಜೆಡಿಎಸ್ ಮುಸ್ಲಿಂ ಮತಗಳನ್ನ ಓಲೈಕೆ ಮಾಡಲಿಕ್ಕೆ ಸಿದ್ದರಾಮಯ್ಯ ನಿಂತಿದ್ದಾರೆ. ಪಠ್ಯ ಪುಸ್ತಕದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಪಠ್ಯ ಪುಸ್ತಕದಲ್ಲಿ ತಪ್ಪುಗಳಿದ್ದರೆ ತಿದ್ದುವುದಾಗಿ ಸರ್ಕಾರ ಹೇಳಿದೆ ಎಂದರು.

ಅದಲ್ಲದೇ, ಶ್ರೀರಾಮಸೇನೆಯಿಂದ ಅಜಾನ್ ವಿರೋಧಿಸಿ ಎರಡನೇ ಹಂತದ ಹೋರಾಟ ವಿಚಾರವಾಗಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಸಂಘಟನೆಗಳಿಗೆ ಪ್ರತಿಭಟನೆ ಮಾಡುವ ಅಧಿಕಾರವಿದೆ. ಅವರು ಮಾಡಲಿ ಆದರೆ ಅವರ ಅಜೆಂಡಾಗಳಿಗೆ ನಾವು ಮನ್ನಣೆ ನೀಡಲು ಆಗಲ್ಲ. ಹಿಂದೂಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದಿವಿ ಅದಕ್ಕೆ ಬದ್ಧವಾಗಿ ದೇಶದಲ್ಲಿ ಹಲವಾರು ಕಾಯ್ದೆ ತಂದಿವಿ. ಆದರೆ ನಮ್ಮದು ಸರ್ವೇ ಜನ ಸುಖಿನೋ ಭವಂತು ಎನ್ನುವ ತತ್ವ ನಮ್ಮದು . ಒಂದು ಸರ್ಕಾರದಲ್ಲಿದ್ದಾಗ ಸಂವಿಧಾನ ಆಧಾರದ ಮೇಲೆ ಕೆಲಸ ಮಾಡಬೇಕು. ಆ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES