Thursday, January 23, 2025

ಕಾಂಗ್ರೆಸ್‌ಗೆ ಓಪನ್ ಆಫರ್ ಇಟ್ಟ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ನಿವೃತ್ತಿಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಮೈಸೂರಿನಲ್ಲಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ 32 ಮತಗಳಿವೆ, ಕಾಂಗ್ರೆಸ್ ಬಳಿ ನಮಗಿಂತ ಕಡಿಮೆ ಮತಗಳಿವೆ. ಕಾಂಗ್ರೆಸ್​ಗಿಂತ ಜೆಡಿಎಸ್ ಅಭ್ಯರ್ಥಿಗೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಬೇಕಿದ್ದರೇ ನಮ್ಮ ಪಕ್ಷದ 2ನೇ ಪ್ರಾಶಸ್ತ್ಯದ ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿಗೆ ನೀಡುತ್ತೇವೆ. ಕಾಂಗ್ರೆಸ್ ಪಕ್ಷದ ಎರಡನೇ ಪ್ರಾಶಸ್ತ್ಯದ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ನೀಡಲಿ ಎಂದರು.

ಅದಲ್ಲದೇ 2023ರ ಕೈ, ತೆನೆ ಮೈತ್ರಿ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಸುಳಿವು ನೀಡಿದ ಅವರು, ಸೆಕ್ಯೂಲರಿಜಂ ಉಳಿಸಬೇಕು ಅಂದ್ರೆ ನೀವು ನಮ್ಮ ಜೊತೆ ಬನ್ನಿ. ಬಿಜೆಪಿ ದೂರ ಇಡಬೇಕು ಅನ್ನೋ ಮನಸ್ಸು ಇದ್ರೆ ನಮಗೆ ಸಹಕಾರ ಕೊಡಿ. ಮುಂದೆ ನೀವು ಚುನಾವಣೆಯಲ್ಲಿ ಪಡೆಯೋದು 70 ರಿಂದ 80 ಸೀಟ್ ಮಾತ್ರ ಎಂದು ಮೈಸೂರಿನಲ್ಲಿ ಕುಮಾರಸ್ವಾಮಿ ಹೇಳಿದರು.

RELATED ARTICLES

Related Articles

TRENDING ARTICLES