Thursday, January 23, 2025

ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಉಗ್ರ ಸಂಘಟನೆಯಿಂದ ಬೆದರಿಕೆ

ಹೊಸದಿಲ್ಲಿ : ಬಿಜೆಪಿ ನಾಯಕಿಯ ಅದೊಂದು ವಿವಾದಾತ್ಮಕ ಮಾತು ಕಮಲ ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಠಿಸಿದೆ.. ಮುಸ್ಲಿಂ ರಾಷ್ಟ್ರಗಳು ಮೋದಿ ಸರ್ಕಾರದ ವಿರುದ್ಧವೇ ಸಮರ ಸಾರಿವೆ.. ಈ ಮಧ್ಯೆ, ಉಗ್ರರು ಬೆದರಿಕೆ ಸಂದೇಶ ರವಾನಿಸಿದ್ದಾರೆ.

ಪ್ರವಾದಿ ಮಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಬೇಷರತ್ ಕ್ಷಮೆ ಯಾಚಿಸಬೇಕು. ಇಲ್ಲದೆ ಹೋದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಉಗ್ರ ಸಂಘಟನೆ ಮುಜಾಹಿದ್ದೀನ್ ಘಜ್ವಾತುಲ್ ಹಿಂದ್ ಬೆದರಿಕೆ ಹಾಕಿದೆ.

ನೂಪುರ್ ಶರ್ಮಾ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಮತ್ತು ಇಡೀ ಜಗತ್ತಿನ ಕ್ಷಮೆ ಕೋರಬೇಕು. ಇಲ್ಲದಿದ್ದರೆ, ಪ್ರವಾದಿಯನ್ನು ಅವಮಾನಿಸುವ ಧೈರ್ಯ ಪ್ರದರ್ಶಿಸಿದವರಿಗೆ ಏನು ಮಾಡಿದ್ದೆವೋ, ಅದನ್ನೇ ಮಾಡುತ್ತೇವೆ ಎಂದು ಟೆಲಿಗ್ರಾಂನಲ್ಲಿ ಪೋಸ್ಟ್ ಮಾಡಿರುವ ಹೇಳಿಕೆಯಲ್ಲಿ ಮುಜಾಹಿದ್ದೀನ್ ಘಜ್ವಾತುಲ್ ಬೆದರಿಕೆ ಹಾಕಿದೆ.

ಇಸ್ಲಾಂ ವಿರುದ್ಧದ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ತಮಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ಜೀವ ಬೆದರಿಕೆಗಳು ಬರುತ್ತಿವೆ ಎಂದು ನೂಪುರ್ ಶರ್ಮಾ ಅವರು ದಿಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ತಮಗೆ ರಕ್ಷಣೆ ನೀಡಬೇಕು ಎಂದು ಅವರು ಕೋರಿದ್ದು, ನೂಪರ್ ಮತ್ತು ಅವರ ಕುಟುಂಬಕ್ಕೆ ದಿಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಟಿವಿ ಚರ್ಚೆ ಸಂದರ್ಭದಲ್ಲಿ ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದ ಸೃಷ್ಟಿಸಿದೆ.

ಬಿಜೆಪಿಯ ನೂಪರ್ ಶರ್ಮಾ ವಿರುದ್ಧ ಆರಂಭವಾದ ಪ್ರತಿಭಟನೆ, ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಗಲ್ಫ್ ದೇಶಗಳು ಭಾರತದ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿವೆ. ಭಾರತೀಯ ಉತ್ಪನ್ನಗಳನ್ನು ಬ್ಯಾನ್‌ ಮಾಡಲಾಗಿದೆ.. ಇದು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಮಹಾರಾಷ್ಟ್ರ ಪೊಲೀಸರಿಂದ ನೂಪುರ್ ಶರ್ಮಾಗೆ ಸಮನ್ಸ್ ಜಾರಿ : 

ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷದಿಂದ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಮಹಾರಾಷ್ಟ್ರ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಜೂನ್ 22ರಂದು ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ವಿರುದ್ಧ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಬ್ರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ವಿವಾದವು ಕೇಂದ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಏಕೆಂದರೆ, ಹೇಳಿಕೆ ನೀಡಿದವರು ಸರ್ಕಾರದ ಭಾಗವಾಗಿರಲಿಲ್ಲ ಎಂದು ಕೇಂದ್ರ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ.

ಸದ್ಯ ನೂಪುರ್‌ ಶರ್ಮಾ ಕೊಟ್ಟಿರುವ ವಿವಾದಾದ್ಮಕ ಹೇಳಿಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡ್ತಿದೆ.. ಮತ್ತೊಂದೆಡೆ, ಕೇವಲ ಬಿಜೆಪಿ ನಾಯಕಿಯಾಗಿದ್ದ ನೂಪರ್‌ಗೆ ಕೊಕ್‌ ಕೊಡಲಾಗಿದೆ.. ಆದ್ರೆ, ಅವರು ಸರ್ಕಾರದ ಭಾಗವಾಗಿರಲಿಲ್ಲ ಅನ್ನೋ ಉತ್ತರ ಕೇಂದ್ರ ಸರ್ಕಾರದಿಂದ ಬರುತ್ತಿದೆ.. ಮುಂದೇನಾಗುತ್ತೆ ಕಾದು ನೋಡ್ಬೇಕು ಅಷ್ಟೆ..

ಬ್ಯೂರೋ ರಿಪೋರ್ಟ್ ಪವರ್‌ ಟಿವಿ

RELATED ARTICLES

Related Articles

TRENDING ARTICLES