Monday, December 23, 2024

ಜಗದೀಶ ಶೆಟ್ಟರ ನಿವಾಸಕ್ಕೆ ಮುತಾಲಿಕ್ ಮುತ್ತಿಗೆ

ಹುಬ್ಬಳ್ಳಿ: ಬಿಜೆಪಿ ನೇತೃತ್ವದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಆಜ್ಞೆಯನ್ನು ಧಿಕ್ಕರಿಸುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಜಗದೀಶ ಶೆಟ್ಟರ ಮನೆ ಮುಂದೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಭಟನೆ ನಡೆಸಿದರು.

ಘೋಷಣೆ ಕೂಗುವ ಮೂಲಕ ಕಾರ್ಯಕರ್ತರ ಜೊತೆಗೆ ಆಗಮಿಸಿದ ಶ್ರೀರಾಮಸೇನೆ ಸಂಸ್ಥಾಪನಾಧ್ಯಕ್ಷ ಪ್ರಮೋದ ಮುತಾಲಿಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹತ್ತಾರು ಕಾರ್ಯಕರ್ತರೊಂದಿಗೆ ಸೇರಿ ಹುಬ್ಬಳ್ಳಿಯ ಮಧುರಾ ಕಾಲೊನಿ ಯಲ್ಲಿರುವ ಮಾಜಿ ಸಿಎಂ ಜಗದೀಶ ಶೆಟ್ಟರ ನಿವಾಸಕ್ಕೆ ಆಗಮಿಸಿದ ಪ್ರತಿಭಟನಾಕಾರರು ಶೆಟ್ಟರ ನಿವಾಸದೆದುರು ಕುಳಿತು ಪ್ರತಿಭಟನೆ ನಡೆಸಿದರು.

ಸುಪ್ರೀಂ ಕೋರ್ಟ್ ಆಜ್ಞೇಯನ್ನ ಧಿಕ್ಕರಿಸುತ್ತಿರುವ ಸರ್ಕಾರ ಎಂದು ಆರೋಪಿಸಿದ ಪ್ರತಿಭಟನಾಕಾರರು, ಅನಧೀಕೃತ ಲೌಡ ಸ್ಪೀಕರ್ ತೆರವಿಗೆ 15ದಿನದ ಗಡುವು ನೀಡಿದ್ದರು. ಅನಧಿಕೃತ ಮೈಕ್ ತೆರವುಗಿಳಿಸದ ಹಿನ್ನೆಲೆ ಶೆಟ್ಟರ ಮನೆ ಮುಂದೆ ಪ್ರತಿಭಟನೆ‌ ನಡೆಸಿದರು.

RELATED ARTICLES

Related Articles

TRENDING ARTICLES