ಶಿವಮೊಗ್ಗ : ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಯುವತಿಯನ್ನು ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ಅಂಬ್ಯುಲೆನ್ಸ್ನಲ್ಲಿ ರವಾನೆ ಮಾಡಲಾಗಿದೆ.
ಲಿವರ್ ತೊಂದರೆಯಿರುವ ಯುವತಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ಅಂಬ್ಯುಲೆನ್ಸ್ನಲ್ಲಿ ರವಾನಿಸಲಾಗಿದೆ.
ರಾಧಿಕಾ (18) ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಯುವತಿ, ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಕಾರಣ ಶಿವಮೊಗ್ಗದಿಂದ ಬೆಂಗಳೂರಿಗೆ ರವಾನೆ ಮಾಡಲಾಗಿದ್ದು, ಯುವತಿಗೆ ಜೀರೋ ಟ್ರಾಫಿಕ್ ಮೂಲಕ ಪೊಲೀಸ್ ಇಲಾಖೆ ವ್ಯವಸ್ಥೆ ಕಲ್ಪಿಸಿದ್ದಾರೆ.