Monday, December 23, 2024

ನಟಿ ಪ್ರಣಿತಾ ಸುಭಾಷ್​​ಗೆ ಹೆಣ್ಣು ಮಗು ಜನನ

ಬೆಂಗಳೂರು : ಖ್ಯಾತ ನಟಿ ಪ್ರಣಿತಾ ಸುಭಾಷ್ ಅವರು ಸಿಹಿಸುದ್ದಿ​ ನೀಡಿದ್ದಾರೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಇತ್ತೀಚೆಗೆ ಪ್ರೆಗ್ನೆಂಟ್ ಆಗಿರುವ ವಿಚಾರವನ್ನು ಹೇಳಿಕೊಂಡಿದ್ದರು. ಈಗ ಅವರ ಮನೆಗೆ ಹೆಣ್ಣು ಮಗುವಿನ ಆಗಮನ ಆಗಿದೆ ಎಂಬ ವಿಚಾರವನ್ನು ಪ್ರಣಿತಾ ಅವರು ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್​​ ಮಾಡಿಕೊಂಡಿದ್ದಾರೆ. ಅಲ್ಲದೆ, ಮಗುವಿನ ಜತೆ ಇರುವ ಮುದ್ದಾದ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದೀಗ ಅವರು ಶೇರ್​ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

2021ರ ಮೇ ತಿಂಗಳಲ್ಲಿ ಉದ್ಯಮಿ ನಿತಿನ್​ ರಾಜು ಜೊತೆ ಪ್ರಣಿತಾ ಹಸೆಮಣೆ ಏರಿದರು.

ಕನ್ನಡದ ‘ಪೊರ್ಕಿ’ ಸಿನಿಮಾ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೂ ಪ್ರಣಿತಾ ಸುಭಾಷ್​ ನಟಿಸಿದ್ದಾರೆ.

RELATED ARTICLES

Related Articles

TRENDING ARTICLES