ಜಮ್ಮು-ಕಾಶ್ಮೀರ: ಬದೇರ್‌ವಾಹ್’ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ, ಕರ್ಫ್ಯೂ ಜಾರಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಕುರಿತು ಜಮ್ಮುವಿನ ದೋಡಾ ಜಿಲ್ಲೆಯ ಬದೇರ್‌ವಾಹ್’ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬದೇರ್‌ವಾಹ್’ನಲ್ಲಿ ಕರ್ಫ್ಯೂ ಜಾರಿಗೊಳಿಸಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ದೋಡಾ (ಜಮ್ಮು ಮತ್ತು ಕಾಶ್ಮೀರ): ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಕುರಿತು ಜಮ್ಮುವಿನ ದೋಡಾ ಜಿಲ್ಲೆಯ ಬದೇರ್‌ವಾಹ್’ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬದೇರ್‌ವಾಹ್’ನಲ್ಲಿ ಕರ್ಫ್ಯೂ ಜಾರಿಗೊಳಿಸಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಜಮ್ಮುವಿನ ಬಡೆರ್ವಾಹ್‌ನಲ್ಲಿರುವ ಮಸೀದಿಯಿಂದ ಪ್ರಚೋದನಕಾರಿ ಘೋಷಣೆ ಮಾಡಲಾಗಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.
ಈ ಹಿನ್ನೆಲೆಯಲ್ಲಿ ಘಟನೆ ಸಂಬಂಧ ಭಾದರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ಕೈಗೆತ್ತಿಕೊಳ್ಳುವ ಯಾರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಅಲ್ಲದೆ, ಎರಡು ಪ್ರತ್ಯೇಕ ಎಫ್ಐಆರ್ ಗಳನ್ನು ದಾಖಲಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕಿಶ್ತ್ವಾರ್ ಮತ್ತು ರಾಂಬನ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿ ಎಂದು ತಿಳಿಸಿದ್ದಾರೆ.