Wednesday, January 22, 2025

ಚಿರತೆ ಚರ್ಮ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್

ಚಿಕ್ಕಮಗಳೂರು : ರಸ್ತೆ ಬದಿ ನಿಂತು ಚಿರತೆ ಚರ್ಮ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಂಚಾರಿ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಇಂದಾವರ ಫ್ಯಾಕ್ಟರಿ ಬಡಾವಣೆಯ ಮಲ್ನಾಡ್ ಸಮುದಾಯ ಭವನದ ಬಳಿ ಬಂಧಿಸಲಾಗಿದೆ. ಬಂಧಿತರನ್ನು ಇಂದಾವರ ಗ್ರಾಮದ ಪರ್ವತ, APMC ಮಾರ್ಕೆಟ್‍ನಲ್ಲಿ ರೈಟರ್ ಕೆಲಸ ಮಾಡುವ ಕಾಂತರಾಜ್ ಹಾಗೂ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.

ಬಂಧಿತರು ಚಿರತೆ ಚರ್ಮವನ್ನು ಕಳೆದ ವರ್ಷವೇ ಮರಣ ಹೊಂದಿದ ಓರ್ವ ವ್ಯಕ್ತಿಯಿಂದ ಖರೀದಿಸಿದ್ದರು ಎಂದು ಹೇಳಲಾಗಿದೆ.

RELATED ARTICLES

Related Articles

TRENDING ARTICLES